ADVERTISEMENT

ಕಾರ್ಮಿಕ ಸಂಘಟನೆಗಳ ಬೃಹತ್ ಪ್ರತಿಭಟನೆ

ಕಾರ್ಮಿಕ, ರೈತ ವಿರೋಧಿ ಕಾನೂನು ತಿದ್ದುಪಡಿ ಕೈಬಿಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 16:19 IST
Last Updated 24 ಸೆಪ್ಟೆಂಬರ್ 2020, 16:19 IST
ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸಿದವು.
ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಗುರುವಾರ ಪ್ರತಿಭಟನೆ ನಡೆಸಿದವು.   

ಗದಗ: ಕಾರ್ಮಿಕರು ಹಾಗೂ ರೈತ ವಿರೋಧಿ ಕಾನೂನು ತಿದ್ದುಪಡಿ ಕೈಬಿಡುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದವು.

ಗದಗ ನಗರದ ಗಾಂಧಿ ವೃತ್ತದಲ್ಲಿ ಒಂದೆಡೆ ಸೇರಿದ ಕಾರ್ಮಿಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಹಿರೇಮಠ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಚಿಟಗಿ ಮಾತನಾಡಿ, ‘ಕೊರೊನಾ ಲಾಕ್‍ಡೌನ್ ವೇಳೆ ರಾಜ್ಯ ಸರ್ಕಾರ ಜಾರಿಗೆ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ರೈತರಿಗೆ ಪೆಟ್ಟು ನೀಡಿದೆ. ಮತ್ತೊಂದೆಡೆ ವಿದ್ಯುತ್ ವಲಯದ ಖಾಸಗೀಕರಣಗೊಳಿಸುವ ಪ್ರಯತ್ನ ನಡೆಸುತ್ತಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಕಾನೂನು ಜಾರಿ ಮೂಲಕ ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಿದ್ದುಪಡಿಗಳ ಸುಗ್ರೀವಾಜ್ಞೆ ಕೈಬಿಡಬೇಕು, ಲಾಕ್‌ಡೌನ್‌ ಅವಧಿಯ ವೇತನವನ್ನು ಕಾರ್ಮಿಕರಿಗೆ ಪೂರ್ಣಪ್ರಮಾಣದಲ್ಲಿ ಪಾವತಿಸಬೇಕು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ರದ್ದು ಪಡಿಸಬೇಕು. ಸಾರ್ವತ್ರಿಕ ಶಿಕ್ಷಣ ಬಲಪಡಿಸಬೇಕು. ಕಾರ್ಮಿಕರಿಗೆ ₹21,000 ಕನಿಷ್ಠ ವೇತನ ನಿಗದಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಮುಖಂಡರಾದ ಪೀರು ರಾಠೋಡ, ರುದ್ರಪ್ಪ ಕಂದ ಗಲ್ಲ, ರುದ್ರಗೌಡ ಸಂಕನಗೌಡ್ರ, ವೀರನಗೌಡ ಪಾಟೀಲ, ಬಸವರಾಜ ಮಂತೂರ, ದುಂಡಮ್ಮ ಬಳಿಗಾರ, ಯಶೋದಾ ಬೆಟಗೇರಿ, ಸಾವಿತ್ರಿ ಸಬನಿಸ, ಪುಷ್ಪಾ ಚವ್ಹಾಣ, ಲಕ್ಷ್ಮಣ ವಡ್ಡರ, ಮಂಜುನಾಥ ಚಲವಾದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.