ADVERTISEMENT

ಮೆಗಾ ಇ–ಲೋಕ್‌ ಅದಾಲತ್‌: 626 ಪ್ರಕರಣಗಳು ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 16:17 IST
Last Updated 20 ಸೆಪ್ಟೆಂಬರ್ 2020, 16:17 IST

ಗದಗ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸಂಧಾನಕ್ಕೆ ಅರ್ಹವಾದ 1,462 ಪ್ರಕರಣಗಳನ್ನು ಮೆಗಾ ಇ-ಲೋಕ್‌ ಅದಾಲತ್‌ಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು.

ಕೋವಿಡ್‍-19ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಎಸ್.ಒ.ಪಿ ಮಾರ್ಗದರ್ಶನದ ಅನ್ವಯ ವಿಡಿಯೊ ಕಾನ್ಫರೆನ್ಸ್‌ ಮೂಲಕ ಕಕ್ಷಿದಾರರು ತಮ್ಮ ವಕೀಲರ ಮೂಲಕ ಪರಸ್ಪರ ಒಪ್ಪಿಗೆ ಮೇರೆಗೆ ರಾಜಿ ಸಂಧಾನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಒಟ್ಟು 626 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು.

ರಾಜಿಯಾದ ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯಕ್ಕೆ ತುಂಬಿದ್ದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲಾಗುವುದು. ಇ– ಲೋಕ್‌ ಅದಾಲತ್‌ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ವೆಂಕನಗೌಡ ಪಾಟೀಲ ಕೃತಜ್ಞತೆ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.