ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಇಲ್ಲಿನ ಭೀಷ್ಮ ವಿಹಾರಧಾಮದಲ್ಲಿ ಹೊಸದಾಗಿ ಆರಂಭಿಸಿರುವ ಸ್ಪೀಡ್ ಬೋಟ್ ಆಟಕ್ಕೆ ಮಂಗಳವಾರ ಚಾಲನೆ ನೀಡಿದರು.
ಈಗಾಗಲೇ ಭೀಷ್ಮ ವಿಹಾರಧಾಮದಲ್ಲಿ ಸೌರಶಕ್ತಿ ಚಾಲಿತ ಬೋಟ್ ಸೇರಿದಂತೆ ವಿವಿಧ ಬೋಟ್‌ಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು ಇದರ ಜೊತೆಗೆ ಸ್ಪೀಡ್ ಬೋಟ್ ಕೂಡ ಸೇರಿಕೊಂಡಿದೆ.
ಸಚಿವ ಎಚ್.ಕೆ.ಪಾಟೀಲ ಅವರು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಬಿ.ಬಿ.ಅಸೂಟಿ ಜತೆಗೆ ಸ್ಪೀಡ್ ಬೋಟ್‌ನಲ್ಲಿ ಭೀಷ್ಮ ಕೆರೆ ಸುತ್ತು ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.