
ರೋಣ: ‘ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ತರುವುದು ದುಸ್ತರವಾಗಿದೆ’ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ತಾಲ್ಲೂಕಿನ ಕೌಜಗೇರಿ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿ ಭೂಲಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಜೆಪಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಾತನಾಡಿ, ‘ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಿದ್ದು, ವೈದ್ಯಕೀಯ ಕಾಲೇಜುಗಳನ್ನು ಹೆಚ್ಚು ಅಭಿವೃದ್ಧಿಗೊಳಿಸಿದೆ’ ಎಂದರು.
ಕೆ.ಎಸ್.ಸಿ.ಸಿ ಮಹಾಮಂಡಲ ಅಧ್ಯಕ್ಷ ಜಿ.ಪಿ. ಪಾಟೀಲ, ಯುವ ಮುಖಂಡ ಉಮೇಶಗೌಡ ಪಾಟೀಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜ್ಯೋತಿ ವಣ್ಣೂರ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಕಂದಕೂರ, ಗ್ರಂಥಾಲಯ ಅಧಿಕಾರಿ ವೆಂಕಟೇಶ್ವರಿ ಜಿ.ಎಸ್, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎ. ಫನಿಬಂಧ, ಮಹಾಂತಯ್ಯ ಹೊಸಮಠ, ಸೋಮು ಚರೇದ, ಮುತ್ತಣ್ಣ ಜಂಗಣ್ಣವರ, ವೀರಸಂಗಯ್ಯ ಮೊಕಾಶಿ, ವೈ.ಎನ್. ಕುಕನೂರ, ಗಿರೀಶಗೌಡ ಪಾಟೀಲ, ಬಸವಂತಪ್ಪ ತಳವಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.