ಲಕ್ಷ್ಮೇಶ್ವರ: ‘ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಜನ್ಮ ದಿನವನ್ನು ಜನರ ಸೇವೆಗಾಗಿ ಮೀಸಲಿಟ್ಟಿದ್ದಾರೆ. ಮೋದಿಯವರು ಈ ದೇಶಕ್ಕೆ ದೊರೆತ ದೊಡ್ಡ ಶಕ್ತಿಯಾಗಿದಗ್ದಾರೆ’ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮದಿನ ಅಂಗವಾಗಿ ಶಿರಹಟ್ಟಿ ಬಿಜೆಪಿ ಮಂಡಲದ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ಬುಧವಾರ ನಡೆದ ರಕ್ತದಾನ ಮತ್ತು ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.
‘ಜನ್ಮ ದಿನದ ಪ್ರಯುಕ್ತ ದೇಶದಾದ್ಯಂತ 15 ದಿನಗಳ ಕಾಲ ಸೇವಾ ಪಾಕ್ಷಿಕ ಕಾರ್ಯಕ್ರಮ ಅಡಿಯಲ್ಲಿ ಸ್ವಚ್ಛತಾ ಅಭಿಯಾನ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದರು.
ಈ ವೇಳೆ ಸುನೀಲ ಮಹಾಂತಶೆಟ್ಟರ, ನಿಂಗಪ್ಪ ಬನ್ನಿ, ಮಾದೇವಪ್ಪ ಅಣ್ಣಿಗೇರಿ, ಅಶ್ವಿನಿ ಅಂಕಲಕೋಟಿ, ಪಿ.ಬಿ. ಖರಾಟೆ, ವಿಜಯ ಹತ್ತಿಕಾಳ, ವಿಜಯ ಮೆಕ್ಕಿ, ಅಶೋಕ ಶಿರಹಟ್ಟಿ, ಡಾ. ಶ್ವೇತಾ ಪಾಟೀಲ, ತಾಲ್ಲೂಕು ವೈದ್ಯಾಧಿಕಾರಿ ಡಾ. ಸುಭಾಸ ದಾಯಗೊಂಡ, ಡಾ. ಶ್ರೀಕಾಂತ ಕಾಟೇವಾಲೆ, ಪರಶುರಾಮ ಇಮ್ಮಡಿ, ಜಗದೀಶಗೌಡ ಪಾಟೀಲ, ನೀಲಪ್ಪ ಹತ್ತಿ, ಎಂ.ಆರ್. ಪಾಟೀಲ, ರಮೇಶ ದನದಮನಿ, ವಿಜಯ ಕುಂಬಾರ, ಮಂಜನಗೌಡ ಕೆಂಚನಗೌಡ, ತಾವರೆಪ್ಪ ಲಮಾಣಿ, ಅನಿಲ ಮುಳಗುಂದ, ನವೀನ ಹಿರೇಮಠ, ಗಂಗಾಧರ ಮೆಣಸಿನಕಾಯಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.