
ಮುಂಡರಗಿ: ‘ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಕಾಲೇಜು ಮೈದಾನದಲ್ಲಿ ಜ.10ರಂದು ಬೃಹತ್ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಹಿಂದೂ ಸಮ್ಮೇಳನ ಸಮಿತಿ ಅಧ್ಯಕ್ಷ ಶ್ರೀನಿವಾಸ ಉಪ್ಪಿನಬೆಟಗೇರಿ ತಿಳಿಸಿದರು.
ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹಿಂದೂ ಸಮ್ಮೇಳನ ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿಂದೂ ಸಮ್ಮೇಳನ ನಿಮಿತ್ತ ಜ.10ರಂದು ಮಧ್ಯಾಹ್ನ 3ಕ್ಕೆ ಪಟ್ಟಣದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಭಾರತಮಾತೆ ಹಾಗೂ ವಿವಿಧ ಸ್ತಬ್ಧ ಚಿತ್ರಗಳ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ಅನ್ನದಾನೀಶ್ವರ ಸ್ವಾಮೀಜಿ ಚಾಲನೆ ನೀಡುವರು’ ಎಂದರು.
ಕುಂಭಮೇಳ, ಡೊಳ್ಳು ಕುಣಿತ, ನಂದಿಕೊಲು, ಸಮ್ಮಾಳ, ಭಜನೆ, ಲಂಬಾಣಿ ಮೇಳ ಸೇರಿದಂತೆ ವಿವಿಧ ಕಲಾ ತಂಡಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ. ಸಂಜೆ 6ಕ್ಕೆ ಜಗದ್ಗುರು ಅನ್ನದಾನೀಶ್ವರ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ. ಜಗದ್ಗುರು ಅನ್ನದಾನೀಶ್ವರ ಮಠದ ಉತ್ತರಾಧಿಕಾರಿ ಮಲ್ಲಿಕಾರ್ಜುನ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ.
ಮುಖಂಡರಾದ ಎಸ್.ಆರ್. ರಿತ್ತಿ, ಆನಂದಗೌಡ ಪಾಟೀಲ, ಕುಮಾರಸ್ವಾಮಿ ಹಿರೇಮಠ ಮಾತನಾಡಿದರು. ಶಿವಪ್ಪ ಚಿಕ್ಕಣ್ಣನವರ, ಮಂಜುನಾಥ ಇಟಗಿ, ಶ್ರೀನಿವಾಸ ಕಟ್ಟಿಮನಿ, ಅಜ್ಜಪ್ಪ ಲಿಂಬಿಕಾಯಿ, ಅನಂತ ಚಿತ್ರಗಾರ, ರವಿ ಲಮಾಣಿ, ಶ್ರೀನಿವಾಸ ಅಬ್ಬಿಗೇರಿ, ಅವಿನಾಶ ಗೋಟಕಿಂಡಿ, ಜಗದೀಶ ಸೋನಿ, ಈರಣ್ಣ ಗಡಾದ, ಪ್ರಕಾಶ ಕುಂಬಾರ, ದೇವೇಂದ್ರಪ್ಪ ರಾಮೇನಹಳ್ಳಿ, ನಾಗರಾಜ ಕೊರ್ಲಹಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.