
ಮುಂಡರಗಿ: ’ವಿದ್ಯಾರ್ಥಿ ಜೀವನದಲ್ಲಿ ಪಿಯುಸಿಯು ಒಂದು ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ಅದ್ಯಯನ ಮಾಡಬೇಕು. ಇಂದು ನೀವು ಮಾಡುವ ಶ್ರಮವು ಮುಂದೆ ಫಲ ನೀಡಲಿದೆ' ಎಂದು ಶಾಸಕ ಡಾ.ಚಂದ್ರು ಲಮಾಣಿ ತಿಳಿಸಿದರು.
ಪಟ್ಟಣದ ಸರ್ಕಾರಿ ಪಿ.ಯು. ಈಚೆಗೆ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಮಯ ಎಲ್ಲರಿಗೂ ಅತ್ಯಮೂಲ್ಯವಾಗಿದ್ದು, ಕಳೆದು ಹೋದ ಸಮಯ ಎಂದಿಗೂ ಮರಳಿ ಬಾರದು. ಸಮಯವನ್ನು ಸದ್ಬಳಕೆ ಮಾಡಿಕೊಳ್ಳುವವರು ಜೀವನದಲ್ಲಿ ಏನನ್ನಾದರೂ ಸಾಧಿಸುತ್ತಾರೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.
ಕಾಲೇಜು ಕಾರ್ಯಕಾರಿ ಸಮಿತಿ ಸದಸ್ಯ ಕೊಟ್ರೇಶ ಅಂಗಡಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ಸ್ಪಷ್ಠ ಗುರಿಯನ್ನು ಹೊಂದಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕರು ಕಾಲೇಜಿನ ಎಲ್ಲ ಅಗತ್ಯಗಳನ್ನು ಪೂರೈಸಿದ್ದಾರೆ. ವಿದ್ಯಾರ್ಥಿಗಳು ಚನ್ನಾಗಿ ಅದ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ಫಕೀರಸಾಬ ಕಲಕೇರಿ ಅವರು ಕಾಲೇಜು ವಾರ್ಷಿಕ ವರದಿ ವಾಚಿಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾತಿತು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಟಿ.ಮಂಜುನಾಥ ಸರ್ವರನ್ನು ಸ್ವಾಗತಿಸಿದರು. ಎ.ಎಂ.ಗೌಡರ ಕಾರ್ಯಕ್ರಮ ನಿರೂಪಿಸಿದರು.
ನಾಗೇಶ ಹುಬ್ಬಳ್ಳಿ, ವಿ.ಎಂ.ಪಾಟೀಲ, ಕುಮಾರಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಹಣಜಿ, ಮಂಜುನಾಥ ಮುಧೋಳ, ಮಹೇಶ ನಾಗರಹಳ್ಳಿ, ಪ್ರಶಾಂತ ಗುಡದಪ್ಪನವರ, ಮೈಲಾರಪ್ಪ ಕಲಕೇರಿ, ಪವಿತ್ರಾ ಕಲ್ಲಕುಟಿಗರ, ಅರುಣಾ ಪಾಟೀಲ, ಪುಷ್ಪಾ ಉಕ್ಕಲಿ, ಮಾರುತಿ ನಾಗರಹಳ್ಳಿ, ವೈ.ಎಚ್.ಬಚೇನಹಳ್ಳಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.