ADVERTISEMENT

ಮುಂಡರಗಿ | ಅಭಿವೃದ್ಧಿ ಕೆಲಸಗಳೇ ಶಾಶ್ವತ: ಮುಂಡರಗಿ

ಕಾಮಗಾರಿಗಳಿಗೆ ಚಾಲನೆ: ಶಾಸಕ ಜಿ.ಎಸ್. ಪಾಟೀಲ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 6:20 IST
Last Updated 9 ಫೆಬ್ರುವರಿ 2026, 6:20 IST
ಮುಂಡರಗಿ ತಾಲ್ಲೂಕಿನ ದಿಂಡೂರು ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಭೂಮಿಪೂಜೆ ಸಮಾರಂಭದಲ್ಲಿ ಶಾಸಕ ಜಿ.ಎಸ್. ಪಾಟೀಲ ಮಾತನಾಡಿದರು 
ಮುಂಡರಗಿ ತಾಲ್ಲೂಕಿನ ದಿಂಡೂರು ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಭೂಮಿಪೂಜೆ ಸಮಾರಂಭದಲ್ಲಿ ಶಾಸಕ ಜಿ.ಎಸ್. ಪಾಟೀಲ ಮಾತನಾಡಿದರು    

ಮುಂಡರಗಿ: ‘ದೇಗುಲಗಳ ಜೀರ್ಣೋದ್ಧಾರ ಸೇರಿದಂತೆ ರಾಜ್ಯ ಸರ್ಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ತಾಲ್ಲೂಕಿನ ಡಂಬಳ ಹೋಬಳಿಯ ದಿಂಡೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಸರ್ಕಾರದ ಯೋಜನೆಗಳನ್ನು ಕೆಲವರು ವಿನಾಕಾರಣ ಟೀಕಿಸುತ್ತಿದ್ದಾರೆ. ಆದರೆ, ಟೀಕೆಗಳು ಸಾಯುತ್ತವೆ, ಅಭಿವೃದ್ಧಿ ಕೆಲಸಗಳು ಸದಾ ಜನಮಾನಸದಲ್ಲಿ ಉಳಿಯುತ್ತವೆ’ ಎಂದರು. 

‘ಗೃಹಲಕ್ಷ್ಮಿ, ಸ್ತ್ರೀ ಶಕ್ತಿ, ಅನ್ನಭಾಗ್ಯ, ಯುವನಿಧಿ ಹಾಗೂ ಗೃಹಜ್ಯೋತಿ ಯೋಜನೆಗಳಿಗೆ ರಾಜ್ಯ ಸರ್ಕಾರ ವರ್ಷಕ್ಕೆ ₹56 ಸಾವಿರ ಕೋಟಿ ವಿನಿಯೋಗಿಸುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಆದರೆ, ವಿರೋಧಿಗಳು ಮಾತ್ರ ಅವುಗಳನ್ನು ದೂರುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

‘ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿ ನೀಡಬೇಕು. ಆ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ತಹಶೀಲ್ದಾರ್ ಯರಿಸ್ವಾಮಿ ಪಿ.ಎಸ್., ಸಿಪಿಐ ಯಶವಂತ ಬಿಸನಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಡಿ. ಮೋರನಾಳ, ಮುಖಂಡರಾದ ಈಶಪ್ಪ ಓಲಿ, ಮಹೇಶ ಗಡಗಿ, ಕುಬೇರ ನಾಯಕ, ಬಸವರಡ್ಡಿ ಬಂಡಿಹಾಳ, ಗೋಪಾಲ ಲಮಾಣಿ, ಬಾಬುಸಾಬ್ ಮೂಲಿಮನಿ, ಮಲ್ಲಿಕಾರ್ಜುನ ಪ್ಯಾಟಿ,‌ ತೇಜಪ್ಪ ರಾಮಚಂದ್ರಪ್ಪ, ಗೋವಿಂದ ಲಮಾಣಿ ಇದ್ದರು.

ವಿವಿಧ ಅಭಿವೃದ್ಧಿ ಕಾಮಗಾರಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ₹5 ಲಕ್ಷ ವೆಚ್ಚದಲ್ಲಿ ಲೋಕಾಮಸಂದ ದೇವಸ್ಥಾನದ ಕಾಮಗಾರಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ₹5 ಲಕ್ಷ ವೆಚ್ಚದಲ್ಲಿ ಸೇವಾಲಾಲ ಸಮುದಾಯ ಭವನ ನಿರ್ಮಾಣ ₹5 ಲಕ್ಷ ವೆಚ್ಚದಲ್ಲಿ ಗೂರೇಶ ಲಕ್ಕವ್ವ ದೇವಸ್ಥಾನದ ಜೀರ್ಣೋದ್ಧಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮದಡಿ ₹10 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಎಸ್. ಪಾಟೀಲ ಭೂಮಿಪೂಜೆ ನೇರವೆರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.