ನರಗುಂದ: ‘ನಿರ್ಮಾಣ ಹಂತದಲ್ಲಿರುವ ಪುರಸಭೆ ನೂತನ ಕಟ್ಟಡ ಹಾಗೂ ತರಕಾರಿ ಮಾರುಕಟ್ಟೆ ನೂತನ ಕಟ್ಟಡಗಳನ್ನು ನವೆಂಬರ್ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು’ ಎಂದು ಶಾಸಕ ಸಿ ಸಿ ಪಾಟೀಲ ಹೇಳಿದರು.
ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಪುರಸಭೆ ನೂತನ ಕಟ್ಟಡ ಹಾಗೂ ತರಕಾರಿ ಮಾರುಕಟ್ಟೆ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಅವರು, ‘₹4.38 ಕೋಟಿ ವೆಚ್ಚದ ಪುರಸಭೆ ನೂತನ ಕಟ್ಟಡ ಹಾಗೂ ₹2.10 ಕೋಟಿ ವೆಚ್ಚದ ತರಕಾರಿ ಮಾರುಕಟ್ಟೆ ಕಟ್ಟಡಗಳನ್ನು ನವೆಂಬರ್ 4ರೊಳಗೆ ಉದ್ಘಾಟನೆ ಮಾಡಲಾಗುವುದು’ ಎಂದರು.
ಪಟ್ಟಣದಲ್ಲಿ ₹3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾರ್ಮಿಕರ ಭವನ ಅ.30 ರೊಳಗೆ ಉದ್ಘಾಟನೆ ಆಗಲಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಆಗಮಿಸಲಿದ್ದಾರೆ. ಕಟ್ಟಡಗಳ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಶೀಘ್ರ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಯಲ್ಲಮ್ಮದೇವಿ ದೇವಸ್ಥಾನದ ಪಕ್ಕದ ತಡೆಗೋಡೆ ಕುಸಿದ ಸ್ಥಳಕ್ಕೆ ಶಾಸಕರು ಭೇಟಿ ನೀಡಿದರು. ಈ ವೇಳೆ ಪುರಸಭೆ ಅಧ್ಯಕ್ಷೆ ನೀಲವ್ವ ವಡ್ಡಿಗೇರಿ, ಉಪಾಧ್ಯಕ್ಷ ಚಂದ್ರಗೌಡ ಪಾಟೀಲ, ಮಾಜಿ ಅಧ್ಯಕ್ಷೆ ಭಾವನಾ ಪಾಟೀಲ, ರಾಚನಗೌಡ ಪಾಟೀಲ, ಸಿದ್ದಪ್ಪ ಯಲಿಗಾರ, ಹಸನ ತಹಶೀಲ್ದಾರ್, ಬಸಪ್ಪ ಅಮರಗೋಳ, ಪ್ರಕಾಶ ಪಟ್ಟಣಶೆಟ್ಟಿ, ಉಮೇಶ ಯಳ್ಳೂರ, ಹನುಮಂತ ಹವಾಲ್ದಾರ, ಮುಖ್ಯಾಧಿಕಾರಿ ಎಸ್.ಎಸ್. ಬ್ಯಾಳಿ, ಕಿರಣ ಮುಧೋಳೆ, ವಿಠ್ಠಲ ಹವಾಲ್ದಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.