ಸಾವು (ಪ್ರಾತಿನಿಧಿಕ ಚಿತ್ರ)
ಗದಗ: ‘ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಬುಧವಾರ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಬೀಸುವ ಕಲ್ಲು ಎತ್ತಿಹಾಕಿ, ನಂತರ ಚಾಕುವಿನಿಂದ ಬರ್ಬರವಾಗಿ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.
‘ಸ್ವಾತಿ ಅಲಿಯಾಸ್ ಯಲ್ಲಮ್ಮ (44) ಕೊಲೆಯಾದವರು. ಗದಗ ಸಾರಿಗೆ ಡಿಪೊದಲ್ಲಿ ನಿರ್ವಾಹಕ ರಮೇಶ್ ನರಗುಂದ ಕೊಲೆ ಆರೋಪಿ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ’ ಎಂದು ಗದಗ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಭೇಟಿ ನೀಡಿ, ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.