ADVERTISEMENT

ನರಗುಂದ ಮತಕ್ಷೇತ್ರ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿವಿಧ ಯೋಜನೆ

₹3.93 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 4:51 IST
Last Updated 10 ಆಗಸ್ಟ್ 2025, 4:51 IST
ನರಗುಂದ ಮತಕ್ಷೇತ್ರದ ಶಾಸಕ ಸಿ.ಸಿ.ಪಾಟೀಲ ಅವರು ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು  
ನರಗುಂದ ಮತಕ್ಷೇತ್ರದ ಶಾಸಕ ಸಿ.ಸಿ.ಪಾಟೀಲ ಅವರು ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು     

ಗದಗ: ಶಾಸಕ ಸಿ.ಸಿ.ಪಾಟೀಲ ಅವರು ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗದಗ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ₹3.93 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಗದಗ ತಾಲ್ಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ₹37.80 ಲಕ್ಷದ ಕಾಮಗಾರಿಗಳು, ಚಿಕ್ಕಹಂದಿಗೋಳ ಗ್ರಾಮದಲ್ಲಿ ₹32.80 ಲಕ್ಷದ ಕಾಮಗಾರಿಗಳು, ಬೆಳಹೋಡ ಗ್ರಾಮದಲ್ಲಿ ₹65 ಲಕ್ಷದ ಕಾಮಗಾರಿಗಳು, ಮದಗಾನೂರ ಗ್ರಾಮದಲ್ಲಿ ₹2.57 ಕೋಟಿಯ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇವುಗಳಲ್ಲಿ ಕೆಲವು ಕಾಮಗಾರಿಗಳು ಲೋಕಾರ್ಪಣೆಗೊಂಡರೆ, ಇನ್ನು ಕೆಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಶ್ಯಾಗೋಟಿ ಗ್ರಾಮದಲ್ಲಿ ₹32.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪ್ರೌಢಶಾಲೆಯ ಎರಡು ಕೊಠಡಿಗಳ ಉದ್ಘಾಟನೆ, ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹5 ಲಕ್ಷ ವೆಚ್ಚದ ಅನ್ನದಾನೇಶ್ವರ ಸಮುದಾಯ ಭವನ ಉದ್ಘಾಟಿಸಿದರು.

ADVERTISEMENT

ಚಿಕ್ಕಹಂದಿಗೋಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹27.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಉದ್ಘಾಟನೆ, ಸಂಸದರ ನಿಧಿಯಿಂದ ₹5 ಲಕ್ಷ ವೆಚ್ಚದ ವೀರಭದ್ರೇಶ್ವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಬೆಳಹೋಡ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ₹65 ವೆಚ್ಚದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದರು.

ಮದಗಾನೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹27.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ಉದ್ಘಾಟಿಸಿದರು. ಲೋಕೋಪಯೋಗಿ ಇಲಾಖೆ ವತಿಯಿಂದ ಚಿಕ್ಕಹಂದಿಗೋಳ -ಬೆಳಹೋಡ–ಮದಗಾನೂರ ರಸ್ತೆಯಲ್ಲಿ ₹2 ಕೋಟಿ ವೆಚ್ಚದ ಸೇತುವೆ ನಿರ್ಮಾಣ (ಮದಗಾನೂರ ಹತ್ತಿರ) ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ರಾಷ್ಟ್ರೀಯ ಹೆದ್ದಾರಿ 63ರಿಂದ ಚಿಕ್ಕಹಂದಿಗೋಳ -ಬೆಳಹೋಡ –ಮದಗಾನೂರ ರಸ್ತೆ ಸುಧಾರಣೆಯ ₹30 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಹಿರಿಯರು, ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಅಧಿಕಾರಿಗಳು ಇದ್ದರು.

ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಟಾನಗೊಂಡಿರುವ ವಿವಿಧ ಯೋಜನೆಗಳು ಕ್ಷೇತ್ರದ ಶೈಕ್ಷಣಿಕ ಸಾಮಾಜಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಲಿವೆ.
– ಸಿ.ಸಿ.ಪಾಟೀಲ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.