ADVERTISEMENT

ನರಗುಂದ| ಬಡವರ ಸೂರಿನ ಕನಸು ನನಸು: ಶಾಸಕ ಪಾಟೀಲ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 4:56 IST
Last Updated 25 ಜನವರಿ 2026, 4:56 IST
ನರಗುಂದದ ಜಗನ್ನಾಥ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ 292 ಮನೆಗಳ ಹಸ್ತಾಂತರ ಸಮಾರಂಭದಲ್ಲಿ ಶಾಸಕ ಸಿ.ಸಿ. ಪಾಟೀಲ ಮಾತನಾಡಿದರು 
ನರಗುಂದದ ಜಗನ್ನಾಥ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ 292 ಮನೆಗಳ ಹಸ್ತಾಂತರ ಸಮಾರಂಭದಲ್ಲಿ ಶಾಸಕ ಸಿ.ಸಿ. ಪಾಟೀಲ ಮಾತನಾಡಿದರು    

ನರಗುಂದ: ‘2023ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ₹30 ಕೋಟಿ ವೆಚ್ಚದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಮೂಲಕ ಪಟ್ಟಣದಲ್ಲಿ 500 ಮನೆ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗಿದ್ದು, 292 ಮನೆ ನಿರ್ಮಾಣ ಆಗಿವೆ. ರಾಜ್ಯದಾದ್ಯಂತ ನಿರ್ಮಾಣವಾಗಿದ್ದು, ಹುಬ್ಬಳ್ಳಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟನೆ ಮಾಡಿದ್ದಾರೆ. ಬಡವರ ಸೂರಿನ ಕನಸು ಇಂದು ನನಸಾಗಿದೆ’ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಪಟ್ಟಣದ ಶ್ರೀ ಜಗನ್ನಾಥ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣವಾಗಿರುವ 292 ಮನೆಗಳ ಹಸ್ತಾಂತರ ಉದ್ಘಾಟನೆ ಸಮಾರಂಭದಲ್ಲಿ ಶನಿವಾರ ಮಾತನಾಡಿದರು.

ಜಗನ್ನಾಥ ಬಡಾವಣೆಯಲ್ಲಿ ರಸ್ತೆ, ಚರಂಡಿ, ವಿದ್ಯುತ್ ಸಂಪರ್ಕ, ಕುಡಿಯುವ ನೀರು, ಅಂಗನವಾಡಿ ಕೇಂದ್ರ, ಸೇರಿದಂತೆ ಸೌಲಭ್ಯ ಒದಗಿಸಲಾಗಿದೆ. ಬಾಕಿ ಉಳಿದ ಕಾಮಗಾರಿಯನ್ನು ಅಧಿಕಾರಿಗಳು ಶೀಘ್ರ ಪೂರ್ಣಗೊಳಿಸಬೇಕು. ಫಲಾನುಭವಿಗಳಿಗೆ 10 ದಿನದೊಳಗೆ ಹಕ್ಕು ಪತ್ರ ಹಾಗೂ ಮನೆಗಳನ್ನು ಹಸ್ತಾಂತರಿಸಲಾಗುವುದು. ಪಲಾನುಭವಿಗಳಿಗೆ ಮನೆ ನೀಡುತ್ತಿರುವುದು ಸಂತಸ ತಂದಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.

ADVERTISEMENT

ಪುರಸಭೆ ಮುಖ್ಯಾಧಿಕಾರಿ ಎಸ್.ಎಸ್. ಬ್ಯಾಳಿ ಮಾತನಾಡಿ, ‘13.29 ಎಕರೆ ಪ್ರದೇಶದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರತಿ ಮನೆ ₹6.50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗಿವೆ. ಫಲಾನುಭವಿಗಳು ತಲಾ ₹1 ಲಕ್ಷ ಹಣ ನೀಡಬೇಕು. ಉಳಿದ ಹಣವನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸರ್ಕಾರ ನೀಡುತ್ತದೆ’ ಎಂದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷ ಶಿವಾನಂದ ಮುತ್ತವಾಡ, ಪ್ರಕಾಶ ಪಟ್ಟಣಶೆಟ್ಟಿ, ಸುನೀಲ ಕುಷ್ಟಗಿ, ರುದ್ರಪ್ಪ ಹೊಸಮನಿ, ರಸುಲ್ ಚೌದರಿ, ಈರಣ್ಣ ನಾಯ್ಕರ, ಎಇಇ ಮಂಜುನಾಥ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.