ನರೇಗಲ್: ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್(ಬಿಸಿಎ) ವಿಭಾಗದ ವಿದ್ಯಾರ್ಥಿಗಳು ಆಗಸ್ಟ್‌ನಲ್ಲಿ ನಡೆದ 2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.
ಪರೀಕ್ಷೆಗೆ ಹಾಜರಾಗಿದ್ದ 31 ವಿದ್ಯಾರ್ಥಿಗಳಲ್ಲಿ ಕೇವಲ 4 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಶೇ 87.096 ರಷ್ಟು ಫಲಿತಾಂಶ ದಾಖಲಾಗಿದೆ. ಇದರಲ್ಲಿ ಅಂಕಿತಾ ಬೆನಹಾಳ(ಶೇ 86.26) ಪ್ರಥಮ, ವೈಷ್ಣವಿ ಪಾಟೀಲ (ಶೇ 86) ದ್ವಿತೀಯ, ಲಕ್ಷ್ಮೀದೇವಿ ದೊಡ್ಡಮನಿ (85.86) ತೃತೀಯ ಸ್ಥಾನ ಪಡೆದಿದ್ದಾರೆ.
ಒಟ್ಟು ಹತ್ತು ವಿದ್ಯಾರ್ಥಿಗಳು 600ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. ಉಳಿದೆಲ್ಲಾ ವಿದ್ಯಾರ್ಥಿಗಳು 500ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಸರ್ಕಾರಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರಾಂಶುಪಾಲ ಎಸ್.ಎಲ್. ಗುಳೇದಗುಡ್ಡ ತಿಳಿಸಿದರು.
ಬಿಸಿಎ ವಿಭಾಗದ ಎಚ್‌ಒಡಿ ಶಶಿಕಲಾ ವಿ.ಎಸ್, ವಿರುಪಾಕ್ಷಪ್ಪ ಸಂಗನಾಳ, ಬಸವರಾಜ ಮಡಿವಾಳರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.