ನರೇಗಲ್: ‘ನಿತ್ಯ ಜೀವನದಲ್ಲಿ ಸಹಬಾಳ್ವೆ, ಸೌಹಾರ್ದತೆ ಎಂಬುದು ಮೂಲಮಂತ್ರವಾಗಬೇಕು. ಆಗ ಎಂತಹದೇ ಸಮಸ್ಯೆ ಬಂದರು ತಾವಾಗಿಯೇ ದೂರವಾಗುತ್ತವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹೇಳಿದರು.
ಪಟ್ಟಣದ 3ನೇ ವಾರ್ಡ್‌ನ ಜಕ್ಕಲಿ ರೋಡ್ ಆಶ್ರಯ ಕಾಲೋನಿಯಲ್ಲಿ ಹಿಂದೂ-ಮುಸ್ಲಿಮರು ಸೇರಿ ಪ್ರತಿಷ್ಠಾಪಿಸುವ ‘ಭಾವೈಕ್ಯ ಗಣೇಶೋತ್ಸವ’ ಶನಿವಾರ ಸಂಜೆ ಭೇಟಿ ಮಾತನಾಡಿದರು.
‘ಇತ್ತೀಚಿನ ದಿನಗಳಲ್ಲಿ ಧರ್ಮ, ನಂಬಿಕೆ, ಕರುಣೆ ಎಂಬುದರ ಕೊರತೆಯಿಂದ ಜನರು ಸಂಬಂಧಗಳನ್ನು ದೂರಮಾಡಿಕೊಳ್ಳುತ್ತಿದ್ದಾರೆ. ಕೂಲಿಕಾರ್ಮಿಕರು, ಬಡವರು, ರೈತರು ಹಾಗೂ ಶ್ರಮಿಕ ವರ್ಗದ ಜನರೇ ಹೆಚ್ಚಾಗಿರುವ ಸ್ತಳದಲ್ಲಿ ಆಚರಣೆಯನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಶ್ಲಾಘನೀಯ’ ಎಂದರು.
ಈ ವೇಳೆ ನರಗುಂದ ಡಿವೈಎಸ್‌ಪಿ ಪ್ರಭುಗೌಡ ಕಿರೇದಹಳ್ಳಿ, ರೋಣ ಸಿಪಿಐ ಎಸ್.ಎಸ್. ಬೀಳಗಿ, ಪಿಎಸ್‌ಐ ಐಶ್ವರ್ಯ ನಾಗರಾಳ, ನಿವಾಸಿಗಳಾದ ದಾದುಸಾಬ ನದಾಫ್, ಶರಣಪ್ಪ ಹಂಚಿನಾಳ, ಸದ್ದಾಂ ನಶೇಖಾನ್, ಹಸನಪ್ಪ ಕೊಪ್ಪಳ, ಪರಸಪ್ಪ ರಾಠೋಡ, ವೀರೇಶ ಪಮ್ಮಾರ, ವಿರೂಪಾಕ್ಷಯ್ಯ ಹಿರೇಮಠ, ಚನ್ನವೀರಯ್ಯ ಹಿರೇಮಠ, ಶರಣಪ್ಪ ಕೊಂಡಿ, ಹನಮಂತಪ್ಪ ಜೋಡಗಂಬಳಿ, ನಿಂಗಯ್ಯ ಸಿದ್ದನಗೌಡ್ರ, ರಾಚಯ್ಯ ಹಿರೇಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.