ADVERTISEMENT

ನರೇಗಲ್ | ಸಂಭ್ರಮದ ವೀರಪ್ಪಜ್ಜನ ಲಘು ರಥೋತ್ಸವ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 5:10 IST
Last Updated 30 ಜನವರಿ 2026, 5:10 IST
ನರೇಗಲ್ ಪಟ್ಟಣದ ಕೋಡಿಕೊಪ್ಪದ ಹಠಯೋಗಿ ವೀರಪ್ಪಜ್ಜನ ಹುಚ್ಚಯ್ಯ ತೇರು (ಲಘು ರಥೋತ್ಸವ) ನೂರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಭ್ರಮದಿಂದ ನಡೆಯಿತು
ನರೇಗಲ್ ಪಟ್ಟಣದ ಕೋಡಿಕೊಪ್ಪದ ಹಠಯೋಗಿ ವೀರಪ್ಪಜ್ಜನ ಹುಚ್ಚಯ್ಯ ತೇರು (ಲಘು ರಥೋತ್ಸವ) ನೂರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಭ್ರಮದಿಂದ ನಡೆಯಿತು   

ನರೇಗಲ್: ಪಟ್ಟಣದ ಕೋಡಿಕೊಪ್ಪದ ಹಠಯೋಗಿ ವೀರಪ್ಪಜ್ಜನ ಹುಚ್ಚಯ್ಯ ತೇರು (ಲಘು ರಥೋತ್ಸವ) ನೂರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಭ್ರಮದಿಂದ ನಡೆಯಿತು.

ಮಹಾರಥೋತ್ಸವದ ದಿನದಿಂದ ಆರಂಭವಾದ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಪ್ರತಿದಿನ ನಡೆಯುತ್ತಿವೆ. ಸಂಜೆ 6:30 ಗಂಟೆಗೆ ನಡೆದ ಲಘು ರಥೋತ್ಸವದ ವೇಳೆ ಭಕ್ತರು ಹಠಯೋಗಿ ವೀರಪ್ಪಜ್ಜನವರಿಗೆ ಜೈ, ತ್ರಿಲೋಕಜ್ಞಾನಿ ಹುಚ್ಚೀರಪ್ಪಜ್ಜಗೆ ಜೈ ಎಂದು ಜಯಘೋಷ ಹಾಕಿದರು. ಮರಳಿ ಸ್ವಸ್ಥಳಕ್ಕೆ ಬಂದು ನಿಂತಾಗ ಚಪ್ಪಾಳೆ ತಟ್ಟಿದ ಭಕ್ತರು ಭಕ್ತಿಭಾವ ಮೆರೆದರು. ಬಳಿಕ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಕಾಯಿ ಒಡೆಸಿ, ನೈವೇದ್ಯ ಅರ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT