ADVERTISEMENT

‘ಮೋದಿಜೀ ಜನಪರ ಕಾರ್ಯಗಳಿಗೆ ವಿಶ್ವವೇ ಮೆಚ್ಚಿದೆ’

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 16:00 IST
Last Updated 3 ಜುಲೈ 2025, 16:00 IST
ಗಜೇಂದ್ರಗಡದಲ್ಲಿರುವ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಗೃಹ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಸಭೆಗೆ ಇಂದಿರಾ ತೇಲಿ ಚಾಲನೆ ನೀಡಿದರು
ಗಜೇಂದ್ರಗಡದಲ್ಲಿರುವ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಗೃಹ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಸಭೆಗೆ ಇಂದಿರಾ ತೇಲಿ ಚಾಲನೆ ನೀಡಿದರು   

ಗಜೇಂದ್ರಗಡ: ‘ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾದ ಬಳಿಕ ದೇಶದ ಪ್ರಗತಿ ವೃದ್ಧಿಸುತ್ತಿದೆ. ದೇಶದ ರಕ್ಷಣೆಗೆ ಆದ್ಯತೆ ನೀಡುವುದರ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ’ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಗುರುವಾರ ಬಿಜೆಪಿ ರೋಣ ಮಂಡಲದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 11 ವರ್ಷ ತುಂಬಿದ ಅಂಗವಾಗಿ  ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ ಮಾತನಾಡಿದರು. ರೋಣ ಮಂಡಲದ ಅಧ್ಯಕ್ಷ ಉಮೇಶ ಮಲ್ಲಾಪುರ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಕೆ.ಚೌವ್ಹಾಣ, ರೋಣ ಮಂಡಲದ ಪ್ರಧಾನ ಕಾರ್ಯದರ್ಶಿ ಬಾಳಾಜಿರಾವ್ ಬೋಸ್ಲೆ, ರಮೇಶ ವಕ್ಕರ, ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೋರ್ಪಡೆ, ಮುಖಂಡರಾದ ಶಿವಾನಂದ ಮಠದ, ಭಾಸ್ಕರ್‌ ರಾಯಬಾಗಿ, ಮುತ್ತಣ್ಣ ಕಡಗದ, ಅಶೋಕ ನವಲಗುಂದ, ಹನುಮಂತಪ್ಪ ಹಟ್ಟಿಮನಿ, ಶರಣಪ್ಪ ಕಂಬಳಿ, ಮಹಾಂತೇಶ ಸೋಮನಕಟ್ಟಿ, ಅನಿಲ ಪಲ್ಲೇದ, ಇಂದಿರಾ ತೇಲಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.