ನರಗುಂದ: ಕಳೆದ ಎರಡು ವಾರಗಳಿಂದ ಸುರಿದ ಮಳೆ ಶುಕ್ರವಾರ ಸಂಪೂರ್ಣ ನಿಂತಿದೆ. ಸವದತ್ತಿ ಬಳಿಯ ಮಲಪ್ರಭಾ ನದಿಯ ನವಿಲುತೀರ್ಥ ಜಲಾಶಯದ ಒಳ ಹರಿವು ತಗ್ಗಿದ್ದು, ಮಲಪ್ರಭಾ ಪ್ರವಾಹ ಸಂಪೂರ್ಣ ಇಳಿಮುಖಗೊಂಡಿದೆ.
ಎರಡು ದಿನಗಳಿಂದ ಇದ್ದ 12 ಸಾವಿರ ಕ್ಯೂಸೆಕ್ ಇದ್ದ ಹೊರ ಹರಿವು ಈಗ 6 ಸಾವಿರ ಕ್ಯೂಸೆಕ್‌ಗೆ ಇಳಿದಿದೆ. ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳು ಆತಂಕದಿಂದ ದೂರವಾಗಿವೆ.
ಪ್ರವಾಹದಿಂದ ಉಂಟಾದ ಬೆಳೆ ಹಾನಿಗೆ ಪರಿಹಾರ ಕೋರಿ ರೈತರು ಕೃಷಿ ಇಲಾಖೆ, ಕಂದಾಯ ಇಲಾಖೆಗೆ ಅಲೆದಾಟ ನಡೆಸಿದ್ದಾರೆ.
ತಾಲ್ಲೂಕಿನ ಕೊಣ್ಣೂರಿನಲ್ಲಿ ಪ್ರವಾಹ ಬಂದ ಜಮೀನುಗಳಿಗೆ ತಹಶೀಲ್ದಾರ್ ಶ್ರೀಶೈಲ ತಳವಾರ, ಕಂದಾಯ ನಿರೀಕ್ಷಕ ಐ.ವೈ. ಕಳಸಣ್ಣವರ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.