ADVERTISEMENT

ಮುಂಡರಗಿ | ‌ಎನ್‌ಡಿಎಗೆ ಗೆಲುವು: ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2025, 2:33 IST
Last Updated 16 ನವೆಂಬರ್ 2025, 2:33 IST
ಬಿಹಾರದಲ್ಲಿ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದ ಪ್ರಯುಕ್ತ ಮುಂಡರಗಿಯ ಬೃಂದಾವನ ವೃತ್ತದಲ್ಲಿ ಶಾಸಕ ಡಾ.ಚಂದು ಲಮಾಣಿ ಹಾಗೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು
ಬಿಹಾರದಲ್ಲಿ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದ ಪ್ರಯುಕ್ತ ಮುಂಡರಗಿಯ ಬೃಂದಾವನ ವೃತ್ತದಲ್ಲಿ ಶಾಸಕ ಡಾ.ಚಂದು ಲಮಾಣಿ ಹಾಗೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು   

ಮುಂಡರಗಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಪ್ರಬುದ್ಧ ನಡವಳಿಕೆ ಹಾಗೂ ಅಸಮಂಜಸ ಹೇಳಿಕೆಗಳು ಬಿಜೆಪಿಗೆ ವರದಾನವಾಗಿದ್ದು, ಬಿಜೆಪಿ ಗೆಲುವಿಗೆ ಅವರು ಪ್ರಮುಖ ಕಾರಣರಾಗಿದ್ದಾರೆ. ಹೀಗಾಗಿ ಬಿಜೆಪಿಯು ಅವರಿಗೆ ಅಭಿನಂದನೆ ಸಲ್ಲಿಸುತ್ತದೆ' ಎಂದು ಶಾಸಕ ಡಾ.ಚಂದ್ರು ಲಮಾಣಿ ವ್ಯಂಗ್ಯವಾಡಿದರು.

ಬಿಹಾರದಲ್ಲಿ ಎನ್.ಡಿ.ಎ. ಮೈತ್ರಿಕೂಟವು ಅಭೂತಪೂರ್ವ ಗೆಲುವು ಸಾಧಿಸಿದ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಶನಿವಾರ ಇಲ್ಲಿಯ ಬೃಂದಾವನ ವೃತ್ತದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.

ಬಿಹಾರದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿದ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಎದುರಿಸಿದ ಎಲ್ಲ ಚುನಾವಣೆಗಳಲ್ಲಿಯೂ ಅಭ್ಯರ್ಥಿಗಳು ಸೋತಿದ್ದು, ಅದು ಬಿಜೆಪಿಗೆ ನೆರವಾಗಿದೆ ಎಂದು ತಿಳಿಸಿದರು.

ADVERTISEMENT

ರಾಜ್ಯ ಸರ್ಕಾರವು ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ರಾಜ್ಯದ ಜನತೆ ನಿತ್ಯ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದು ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಕೆ.ವಿ.ಹಂಚಿನಾಳ, ಆನಂದಗೌಡ ಪಾಟೀಲ, ಎಸ್.ವಿ.ಪಾಟೀಲ, ಕುಮಾರಸ್ವಾಮಿ ಹಿರೇಮಠ, ನಾಗೇಶ ಹುಬ್ಬಳ್ಳಿ, ಮಂಜುನಾಥ ಮುಧೋಳ, ಎಸ್.ಎಸ್.ಗಡ್ಡದ, ಎಲ್ಲಪ್ಪ ಗಣಾಚಾರಿ, ಧ್ರುವಕುಮಾರ ಹೊಸಮನಿ, ಅರುಣಾ ಪಾಟೀಲ, ಪವಿತ್ರಾ ಕಲ್ಲಕುಟಿಗರ, ಪುಷ್ಪಾ ಉಕ್ಕಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.