ADVERTISEMENT

ನಯಾಪೈಸೆ ಕೊಟ್ಟಿಲ್ಲ: ದಿಂಗಾಲೇಶ್ವರ ಶ್ರೀಗೆ ನಿರಂಜನಾನಂದಪುರಿ ಸ್ವಾಮೀಜಿ ತಿರುಗೇಟು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2022, 14:10 IST
Last Updated 19 ಏಪ್ರಿಲ್ 2022, 14:10 IST
ನಿರಂಜನಾನಂದಪುರಿ ಸ್ವಾಮೀಜಿ
ನಿರಂಜನಾನಂದಪುರಿ ಸ್ವಾಮೀಜಿ    

ಗಜೇಂದ್ರಗಡ (ಗದಗ ಜಿಲ್ಲೆ): ‘ಕಾಗಿನೆಲೆ ಕನಕ ಗುರುಪೀಠ ಸೇರಿದಂತೆ ಹಲವು ಮಠಗಳು ಸರ್ಕಾರದಿಂದ ಸಾಕಷ್ಟು ಅನುದಾನ ಪಡೆದಿವೆ. ಆದರೆ, ಯಾರೂ ಯಾವುದೇ ಕಮಿಷನ್ ಕೊಟ್ಟಿಲ್ಲ. ಇತ್ತೀಚೆಗೆ ಈ ಭಾಗದ ಸ್ವಾಮೀಜಿಯೊಬ್ಬರು ಮಠಗಳಿಂದಲೂ ಕಮಿಷನ್ ಪಡೆಯಲಾಗುತ್ತಿದೆ ಎಂದು ಸರ್ಕಾರದ ಮೇಲೆ ಗೂಬೆ ಕೂರಿಸಿರುವುದು ಸತ್ಯಕ್ಕೆ ದೂರ’ ಎಂದು ಹಾವೇರಿಯ ಕಾಗಿನೆಲೆ ಮಹಾಸಂಸ್ಥಾನಮಠದ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ,ದಲಿತ ಮಠಾಧೀಶರ ಒಕ್ಕೂಟಕ್ಕೆ ₹119 ಕೋಟಿ ಅನುದಾನ ನೀಡಿದ್ದಾರೆ. ಈ ಹಿಂದೆ ಸದಾನಂದಗೌಡ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರುಗಳು ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಮಠಗಳಿಗೆ ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗಾಗಿ ನೂರಾರು ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಈ ಎಲ್ಲ ಅನುದಾನಗಳು ಸರ್ಕಾರದಿಂದ ಜಿಲ್ಲಾಧಿಕಾರಿಗಳ ಖಜಾನೆಗೆ ಬಂದು ಅಲ್ಲಿಂದ ನೇರವಾಗಿ ಮಠಗಳ ಖಾತೆಗೆ ಜಮೆಯಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಬಳಕೆಯಾಗಿವೆ. ಇದರಲ್ಲಿ ಯಾರಿಗೂ ನಯಾ ಪೈಸೆ ಕಮಿಷನ್ ನೀಡಿಲ್ಲ’ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳ ಹೆಸರು ಉಲ್ಲೇಖಿಸದೇ ತಿರುಗೇಟು ನೀಡಿದರು.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.