ADVERTISEMENT

ಮಲ್ಲಿಕಾರ್ಜುನ ಕುಂಬಾರಗೆ ‘ನೊಳಂಬ ಶ್ರೀ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 4:32 IST
Last Updated 6 ನವೆಂಬರ್ 2025, 4:32 IST
ಮಲ್ಲಿಕಾರ್ಜುನ ಕುಂಬಾರ
ಮಲ್ಲಿಕಾರ್ಜುನ ಕುಂಬಾರ   

ಗದಗ: ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದ ಮಲ್ಲಿಕಾರ್ಜುನ ಕುಂಬಾರ ಅವರ ಸಂಶೋಧನಾ ಕ್ಷೇತ್ರದಲ್ಲಿನ ಸಾಧನೆ ಪರಿಗಣಿಸಿ ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿಯು ಅರಸೀಕೆರಿ ಮೇಲಣಮಠದ ಲಿಂ. ಎಸ್.ಸಿದ್ದಣ್ಣಯ್ಯ ಮತ್ತು ಗಂಗಮ್ಮ ಸ್ಮಾರಕ ಟ್ರಸ್ಟ್ ನೀಡುವ ‘ನೋಳಂಬ ಶ್ರೀ’ ಪ್ರಶಸ್ತಿ ಪ್ರಕಟಿಸಿದೆ.

ಕರ್ನಾಟಕ ಇತಿಹಾಸ ಅಕಾಡೆಮಿಯ 39ನೇ ಸಮ್ಮೇಳನವು ಗದಗ ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ವಿಶ್ವವಿದ್ಯಾಲಯದಲ್ಲಿ ನವೆಂಬರ್ 8, 9 ಮತ್ತು 10ರಂದು ನಡೆಯಲಿದೆ. ನ.8ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಮಲ್ಲಿಕಾರ್ಜುನ ಕುಂಬಾರ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸ್ಥಳೀಯ ಚರಿತ್ರೆಯನ್ನು ಒಳಗೊಂಡಂತೆ ಮಲ್ಲಿಕಾರ್ಜುನ ಕುಂಬಾರ ಅವರು 20ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.