ಲಕ್ಷ್ಮೇಶ್ವರ: ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕಿನ ಎಲ್ಲ ಕೂಲಿಕಾರರಿಗೆ ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ. 14 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಜಾಬ್‍ಕಾರ್ಡ್ ಹೊಂದಿರುವ ಕೂಲಿಕಾರರು ಇ-ಕೆವೈಸಿ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ತಿಳಿಸಿದರು.
ತಾಲ್ಲೂಕಿನ ಬಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದ್ರಳ್ಳಿ ತಾಂಡಾದಲ್ಲಿ ನರೇಗಾ ಕೂಲಿಕಾರ್ಮಿಕರ ಜಾಬ್‍ಕಾರ್ಡ್‍ಗೆ ಸ್ಥಳದಲ್ಲಿಯೇ ಇ-ಕೆವೈಸಿ ಮಾಡುವ ಕುರಿತು ಬುಧವಾರ ಮಾಹಿತಿ ನೀಡಿದ ಅವರು, ‘ತಾಲ್ಲೂಕಿನ ಅನೇಕ ಕೂಲಿಕಾರರು ಈ ಪ್ರಕ್ರಿಯೆ ಪೂರ್ಣಗೊಳಿಸಿಲ್ಲ. ಅ. 20ರ ಒಳಗಾಗಿ
ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ’ ಎಂದರು.
‘ಲಕ್ಷ್ಮೇಶ್ವರ ತಾಲ್ಲೂಕಿನ ಒಟ್ಟು 14 ಗ್ರಾಮ ಪಂಚಾಯಿತಿಗಳಲ್ಲಿ 18,146 ಕುಟುಂಬಗಳಿವೆ. 41,544 ನೋಂದಣಿ ಕೂಲಿಕಾರರು ಇದ್ದು, ಅದರಲ್ಲಿ 29,136 ಸಕ್ರಿಯ ಕೂಲಿಕಾರರು ಇದ್ದಾರೆ. ತಾಲ್ಲೂಕಿನಲ್ಲಿ ಸಾಮೂಹಿಕ ಹಾಗೂ ವೈಯಕ್ತಿಕ ಕಾಮಗಾರಿ ಮೂಲಕ ಕೂಲಿಕಾರರಿಗೆ 100 ದಿನಗಳ ಕನಿಷ್ಠ ಉದ್ಯೋಗ ಒದಗಿಸಲಾಗುತ್ತಿದೆ’ ಎಂದರು.
ಇ-ಕೆವೈಸಿ ಕುರಿತು ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಡಂಗುರ ಸಾರುವ ಮೂಲಕ ಪ್ರಚಾರ ಪಡಿಸಲಾಗಿದೆ. ಕೂಲಿಕಾರ್ಮಿಕರು ಗ್ರಾಮ ಪಂಚಾಯಿತಿಗೆ ತೆರಳಿ ಗ್ರಾಮ ಪಂಚಾಯತಿ ಸಿಬ್ಬಂದಿ ಸಂಪರ್ಕಿಸಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯಿತಿ ಐಇಸಿ ಮಂಜುನಾಥಸ್ವಾಮಿ ಹೆಚ್.ಎಂ. ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.