ADVERTISEMENT

ಸಾಮಾಜಿಕ ಜಾಗೃತಿಗೆ ಎನ್‌ಎಸ್‌ಎಸ್ ಪ್ರೇರಕ: ಅಜ್ಜನಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 4:35 IST
Last Updated 26 ಸೆಪ್ಟೆಂಬರ್ 2025, 4:35 IST
ನರಗುಂದದ ಯಡಿಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಪ್ರಾಚಾರ್ಯ ಆರ್.ಬಿ. ಪಾಟೀಲ ಉದ್ಘಾಟಿಸಿದರು
ನರಗುಂದದ ಯಡಿಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಪ್ರಾಚಾರ್ಯ ಆರ್.ಬಿ. ಪಾಟೀಲ ಉದ್ಘಾಟಿಸಿದರು   

ನರಗುಂದ: ‘ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ. ಸಾಮಾಜಿಕ ಜಾಗೃತಿಗೆ ಎನ್‌ಎಸ್‌ಎಸ್ ಪ್ರೇರಕವಾಗಿದೆ’ ಎಂದು ಎಸ್‌ವೈಎಸ್ ಶಿಕ್ಷಣ ಸಂಸ್ಥೆ ನಿರ್ದೇಶಕ ಅಜ್ಜನಗೌಡ ಪಾಟೀಲ ಹೇಳಿದರು.

ಪಟ್ಟಣದ ಯಡಿಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಶೇಷ ಸಾಧನೆ ತೋರಿದ ಪ್ರಶಿಕ್ಷಣಾರ್ಥಿಗಳನ್ನು ಸನ್ಮಾನಿಸಲಾಯಿತು. ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎಂ.ಇ. ವಿಶ್ವಕರ್ಮ ಮಾತನಾಡಿದರು. ಕಾಲೇಜು ಪ್ರಾಚಾರ್ಯ ಆರ್.ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಸಾವಿತ್ರಿ ಬಳಿಗೇರ, ಬಸಿರ್ ಅಹ್ಮದ್, ಲಾಲಸಾಬ್‌ ಅತ್ತಾರ್, ಸ್ನೇಹ ಸಾವಂತ, ಸುಧಾ ಜನ್ನರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.