ADVERTISEMENT

ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಿ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಗದಗ ಜಿಲ್ಲಾ ಘಟಕ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 2:09 IST
Last Updated 2 ಆಗಸ್ಟ್ 2022, 2:09 IST
ವೀರಶೈವ ಲಿಂಗಾಯತ ಒಳಪಂಗಡದ ಎಲ್ಲ ಜಾತಿಗಳನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೆ ಶಿಫಾರಸು ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಸಲ್ಲಿಸಿತು.
ವೀರಶೈವ ಲಿಂಗಾಯತ ಒಳಪಂಗಡದ ಎಲ್ಲ ಜಾತಿಗಳನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೆ ಶಿಫಾರಸು ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಸಲ್ಲಿಸಿತು.   

ಗದಗ: ವೀರಶೈವ ಲಿಂಗಾಯತ ಒಳಪಂಗಡದ ಎಲ್ಲ ಜಾತಿಗಳನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೆ ಶಿಫಾರಸು ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಗದಗ ಜಿಲ್ಲಾ ಘಟಕ ಸೋಮವಾರ ಗದಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ನಗರದ ವೀರಶೈವ ಜನರಲ್ ಲೈಬ್ರರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಬಸವೇಶ್ವರ ವೃತ್ತ, ರಾಚೋಟೇಶ್ವರ ದೇವಸ್ಥಾನ, ಮುಳಗುಂದ ನಾಕಾ ಮೂಲಕ ಜಿಲ್ಲಾಡಳಿತ ಭವನ ತಲುಪಿತು.ಮನವಿಯನ್ನು ಪ್ರಭಾರ ಎಡಿಸಿ ಅನ್ನಪೂರ್ಣ ಮುದಕಮ್ಮನವರ ಸ್ವೀಕರಿಸಿದರು.

ರಾಜ್ಯದಲ್ಲಿ 60 ವರ್ಷಗಳಿಂದ ವೀರಶೈವ ಲಿಂಗಾಯತ ಸಮುದಾಯವನ್ನು ಇತರೆ ಹಿಂದುಳಿದ ವರ್ಗ ಎಂದು ಪರಿಗಣಿಸಲಾಗಿದ್ದರೂ, ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಆಗಿಲ್ಲ. ಇದರಿಂದಾಗಿ ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಸೌಕರ್ಯಗಳಿಂದ ಸಮಾಜವು ವಂಚಿತವಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ವೀರಶೈವ ಲಿಂಗಾಯತ ಸಮುದಾಯವು ಬಹುತೇಕ ಕೃಷಿ ಮತ್ತು ಕೃಷಿ ಆಧಾರಿತ ಕಸುಬುಗಳನ್ನು ಅವಲಂಬಿಸಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದೆ. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರದೇ ಇರುವ ಕಾರಣ ನಮ್ಮ ಸಮುದಾಯದ ಜನರು ದಶಕಗಳಿಂದ ಕೇಂದ್ರ ಸರ್ಕಾರದ ನೇಮಕಾತಿ ಅವಕಾಶಗಳಿಂದ ವಂಚಿತರಾಗಿರುತ್ತಾರೆ. ಕೂಡಲೇ ರಾಜ್ಯ ಸರ್ಕಾರವು ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಭಟನೆ ವೇಳೆ ಮಾಜಿ ಸಚಿವ ಎಸ್. ಎಸ್. ಪಾಟೀಲ. ವಿಧಾನ ಪರಿಸತ್ ಸದಸ್ಯ ಎಸ್.ವಿ.ಸಂಕನೂರ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಎಂ. ಕೊರ್ಲಹಳ್ಳಿ, ಮುಖಂಡರಾದ ವಿಜಯಕುಮಾರ ಗಡ್ಡಿ, ಶಿವನಾಂದ ಪಲ್ಲೇದ, ಜಿಲ್ಲಾ ಉಸ್ತುವಾರಿ ಮಧುರಾ ಅಶೋಕಕುಮಾರ, ಗದಗ-ಬೆಟಗೇರಿ ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸಿದ್ದು ಪಲ್ಲೇದ, ಗದಗ-ಬೆಟಗೇರಿ ನಗರಸಭೆ ಹೈಸ್ಕೂಲ್ ಕಮಿಟಿ ಅಧ್ಯಕ್ಷ ಮಹಾಂತೇಶ ನಲವಡಿ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಗದಗ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಬಿ. ಅಸೂಟಿ, ಸದಾಶಿವಯ್ಯ ಮದರಿಮಠ, ಎಸ್. ಬಿ. ಕರಿಭರಮಗೌಡ್ರ, ಸುರೇಖಾ ಪಿಳ್ಳಿ, ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಘರಾಜೇಂದ್ರ ಬಡ್ನಿ, ಕೋಶಾಧ್ಯಕ್ಷ ಮಲ್ಲಿಕಾರ್ಜುನಗೌಡ ಎಸ್. ಮಲ್ಲಾಪೂರ, ಕಾರ್ಯದರ್ಶಿ ಸಿ.ಎಸ್. ಸಂಗಳದಮಠ, ವಿಜಯಲಕ್ಷ್ಮೀ ಮಾನ್ವಿ, ಸಂಗನಗೌಡ ಪಾಟೀಲ (ಅರಹುಣಸಿ), ಎಂಸಿಎ ನಿಗಮದ ಅಧ್ಯಕ್ಷ ಎಂ. ಎಸ್. ಕರಿಗೌಡ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.