
ಹಣ
ಗದಗ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಾದ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ಗುರಿ-ಒಲಿಂಪಿಕ್ಸ್ ಪದಕ, ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ, ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಅಧಿಕೃತ ಜಾಲತಾಣ https://sevasindhu.karnataka.gov.in ಮೂಲಕ ಡಿ.3ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಮಟ್ಟದ ಪ್ರಾಚ್ಯಪ್ರಜ್ಞೆ ಸ್ಪರ್ಧೆ
ಗದಗ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯವ್ಯಯ ಘೋಷಿತ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪ್ರಾಚ್ಯಪ್ರಜ್ಞೆ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆ ಹಾಗೂ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನ.25ರಂದು ಮಧ್ಯಾಹ್ನ 2ಕ್ಕೆ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ನ.25ರಂದು ಅದೇ ಸ್ಥಳದಲ್ಲಿ ನಾಲ್ಕು ಸ್ಪರ್ಧೆಗಳು ಪ್ರತ್ಯೇಕವಾಗಿ ನಡೆಯಲಿವೆ.
ಈ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಅತಿಥಿ ಗಣ್ಯರುಗಳು, ಜಿಲ್ಲಾಡಳಿತ, 35 ಶೈಕ್ಷಣಿಕ ಜಿಲ್ಲೆಗಳಿಂದ ಜಿಲ್ಲಾಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ನೋಡಲ್ ಅಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ಪುರಾತತ್ವ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸುವರು.
ನ.24ರಂದು ವಿದ್ಯಾರ್ಥಿಗಳು, ನೋಡಲ್ ಅಧಿಕಾರಿಗಳು, ಸಂಚಾಲಕರು, ಇಲಾಖಾಧಿಕಾರಿಗಳು ಸಿಬ್ಬಂದಿಗೆ ಲಕ್ಕುಂಡಿ ಪಾರಂಪರಿಕ ಪ್ರದೇಶಕ್ಕೆ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಗದಗ: 2025-26ನೇ ಸಾಲಿನಲ್ಲಿ ಪಿಯುಸಿ ಹೊರತುಪಡಿಸಿ ಉಳಿದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ, ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಮತ್ತು ಶುಲ್ಕ ಮರುಪಾವತಿ ಕಾರ್ಯಕ್ರಮಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನ ನ.25ರ ವರೆಗೆ ವಿಸ್ತರಿಸಲಾಗಿದೆ.
https://ssp.postmatric.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗದಗ, ದೂರವಾಣಿ ಸಂಖ್ಯೆ 08372-237414 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.