ADVERTISEMENT

ಮೂರ್ತಿ ಪ್ರತಿಷ್ಠಾನೆಗೆ ವಿರೋಧ: ಅಕ್ಷಮ್ಯ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2023, 13:22 IST
Last Updated 17 ಆಗಸ್ಟ್ 2023, 13:22 IST

ಮುಂಡರಗಿ: ‘ಬೆಳಗಾವಿ ಜಿಲ್ಲೆಯ ಕುರುಬಗಟ್ಟಿ ಗ್ರಾಮದಲ್ಲಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ  ಮೂರ್ತಿ ಪ್ರತಿಷ್ಠಾಪನೆಗೆ ಮುಂದಾದವರ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಂಡಿರುವುದು ಅಕ್ಷಮ್ಯ’ ಎಂದು ಮೀಸಲಾತಿ ನಮ್ಮ ಹಕ್ಕು ಸಮಿತಿ ಮುಖಂಡ ದೇವಪ್ಪ ಇಟಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಚನ್ನಮ್ಮನ ಪೂರ್ತಿ ಪ್ರತಿಷ್ಠಾಪನೆಗೆ ಪೊಲೀಸರು ಅಡ್ಡಿಪಡಿಸಿರುವುದು ಸರಿಯಲ್ಲ. ಮೂರ್ತಿ ಪ್ರತಿಷ್ಠಾಪಿಸಲು ಅವಕಾಶ ನೀಡಬೇಕು ಎಂದು ಅಲ್ಲಿನ ಕಾರ್ಯಕರ್ತರು ಹಲವು ಬಾರಿ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಸ್ಪಂದಿಸದಿರುವ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕಾನೂನು ಕೈಗೆ ತಗೆದುಕೊಂಡಿರುವುದು ಸಲ್ಲ’ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವ ಮುಖಂಡರಾದ ನಾಗರಾಜ ಮುರುಡಿ, ಸೋಮು ಹಕ್ಕಂಡಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.