ADVERTISEMENT

‘ಪರಿಸರ ರಕ್ಷಣೆಯಾದರೆ ಮನುಕುಲ ಉಳಿದೀತು’

ಬಿಂಕದಕಟ್ಟಿ ಮೃಗಾಲಯದಲ್ಲಿ ಪರಿಸರ ದಿನಾಚರಣೆ; ವಿದ್ಯಾರ್ಥಿಗಳಿಂದ ಸೈಕಲ್‌ ರ್‍ಯಾಲಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 15:34 IST
Last Updated 5 ಜೂನ್ 2019, 15:34 IST
ಪರಿಸರ ದಿನಾಚರಣೆ ಅಂಗವಾಗಿ ಮಂಗಳವಾರ ಗದುಗಿನಲ್ಲಿ ಶಾಲಾ ವಿದ್ಯಾರ್ಥಿಗಳ ಸೈಕಲ್‌ ‌ರ್‍ಯಾಲಿಗೆ ಸಿಇಒ ಮಂಜನಾಥ ಚವ್ಹಾಣ, ಎಸ್ಪಿ ಶ್ರೀನಾಥ ಜೋಶಿ, ಜಿಲ್ಲಾ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ  ಚಾಲನೆ ನೀಡಿದರು
ಪರಿಸರ ದಿನಾಚರಣೆ ಅಂಗವಾಗಿ ಮಂಗಳವಾರ ಗದುಗಿನಲ್ಲಿ ಶಾಲಾ ವಿದ್ಯಾರ್ಥಿಗಳ ಸೈಕಲ್‌ ‌ರ್‍ಯಾಲಿಗೆ ಸಿಇಒ ಮಂಜನಾಥ ಚವ್ಹಾಣ, ಎಸ್ಪಿ ಶ್ರೀನಾಥ ಜೋಶಿ, ಜಿಲ್ಲಾ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ  ಚಾಲನೆ ನೀಡಿದರು   

ಗದಗ: ‘ಪರಿಸರ ರಕ್ಷಣೆಯಾದರೆ ಮನುಕುಲ ಉಳಿಯುತ್ತದೆ. ಈ ನಿಟ್ಟಿನಲ್ಲಿ ಪರಿಸರ ರಕ್ಷಣೆಗಾಗಿ ರಾಜ್ಯಾದ್ಯಂತ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ 5 ತಾಲ್ಲೂಕುಗಳಲ್ಲಿ 1 ಲಕ್ಷ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಹೇಳಿದರು.

ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪರಿಸರ ನಾಶದಿಂದ ಭೂಮಿಯ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಮುಂದಿನ ಪೀಳಿಗೆಗೆ ಶುದ್ಧ ವಾಯು, ಜಲ ಲಭಿಸುವಂತೆ ಮಾಡಲು ಪರಿಸರವನ್ನು ಸಂರಕ್ಷಿಸಬೇಕಾಗಿದೆ. ಅರಣ್ಯ, ಕೆರೆಗಳನ್ನು ಸಂರಕ್ಷಿಸಬೇಕು. ವಿದ್ಯಾರ್ಥಿಗಳು ಶಾಲಾ ಆವರಣ, ಮನೆ ಆವರಣದಲ್ಲಿ ಸಸಿಗಳನ್ನು ನೆಡಲು ಮುಂದಾಗಬೇಕು. ಹಸಿರೀಕರಣದ ಮೂಲಕ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಪಣ ತೊಡಬೇಕು’ ಎಂದರು.

ADVERTISEMENT

ಅರಣ್ಯ ಸಂರಕ್ಷಣಾಧಿಕಾರಿ ಆರ್.ಎಸ್.ನಾಗಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.‘ಜಲ,ಗಾಳಿ, ಮಣ್ಣು ಸಂರಕ್ಷಣೆ ಇಂದಿನ ಅಗತ್ಯವಾಗಿದೆ’ ಎಂದರು.

ಅಪರ ಜಿಲ್ಲಾ ನ್ಯಾಯಾಧೀಶ ನರಶಿಂಸಾ ಎಂ.ವಿ, ಕೌಟುಂಬಿಕ ನ್ಯಾಯಾಲಯ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಪಿ.ಜಿ. ಚೆಲುವಮೂರ್ತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ , ಜಿಲ್ಲಾ ಆಯುಷ್‌ ಆಧಿಕಾರಿ ಡಾ. ಸುಜಾತಾ ಪಾಟೀಲ, ಬಿ. ರುದ್ರೇಶ, ಕೆಳದಿಮಠ, ಎಂ.ಎ. ರಡ್ಡೇರ, ವೈ.ಡಿ. ತಳವಾರ ಇದ್ದರು. ಬಿ.ಎಂ. ಕುಕನೂರ ಸ್ವಾಗತಿಸಿದರು. ಮನೋಹರ ಚಿತ್ತವಾಡಗಿ ವಂದಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳಾ ವಿ.ಎಚ್. ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.