ADVERTISEMENT

ಗದಗ: ಯೋಜನಾ ಎಂಜಿನಿಯರ್‌ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2025, 23:29 IST
Last Updated 3 ಜನವರಿ 2025, 23:29 IST
ಆತ್ಮಹತ್ಯೆ–ಪ್ರಾತಿನಿಧಿಕ ಚಿತ್ರ
ಆತ್ಮಹತ್ಯೆ–ಪ್ರಾತಿನಿಧಿಕ ಚಿತ್ರ   

ಗದಗ: ನಿರ್ಮಿತಿ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಯೋಜನಾ ಎಂಜಿನಿಯರ್‌ ಆಗಿದ್ದ ಶಂಕರಗೌಡ ಪಾಟೀಲ ಎಂಬುವರು ನಗರದ ಲಾಡ್ಜ್‌ನಲ್ಲಿ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಬಸ್ ನಿಲ್ದಾಣ ಸಮೀಪದ ಲಾಡ್ಜ್‌ನಲ್ಲಿ ಕೊಠಡಿ ಬಾಡಿಗೆ ಪಡೆದ ಶಂಕರಗೌಡ ಪಾಟೀಲ ಅವರು ಹಲವು ಗಂಟೆಗಳಾದರೂ ಹೊರಬರಲಿಲ್ಲ. ಸಂಶಯದಿಂದ ಲಾಡ್ಜ್ ಸಿಬ್ಬಂದಿ ಪರಿಶೀಲಿಸಿದಾಗ, ಆತ್ಮಹತ್ಯೆ ವಿಷಯ ಗೊತ್ತಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಬೆಟಗೇರಿ ಬಡಾವಣೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT