ಗಜೇಂದ್ರಗಡ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.
ಸೋಮವಾರ ನಸುಕಿನ ಜಾವವೂ ಮಳೆ ಸುರಿಯಿತು. ಮಂಗಳವಾರ ಬೆಳಗಿನಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಗುಡುಗು, ಸಿಡಿಲು ಸಹಿತ ಸುರಿಯಲು ಆರಂಭಿಸಿದ ಮಳೆ ಅರ್ಧ ಗಂಟೆಗೂ ಅಧಿಕಕಾಲ ಸುರಿಯಿತು. ಕಳೆದ ನಾಲೈದು ದಿನಗಳಿಂದ ಮಳೆಯಾಗುತ್ತಿದೆ. ಭೂಮಿ ಹಸಿಯಾಗಿದ್ದು, ಈಗಾಗಲೇ ಬಿತ್ತನೆಗೆ ಭೂಮಿ ಹದಗೊಳಿಸಿರುವ ರೈತರು ಸಕಾಲದಲ್ಲಿ ಬಿತ್ತನೆ ಮಾಡಲು ಬೀಜ, ರಸಗೊಬ್ಬರ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.