ADVERTISEMENT

ಉಗ್ರರ ನೆಲೆ ಧ್ವಂಸ ಶ್ಲಾಘನೆ: ಎಚ್.ಕೆ. ಪಾಟೀಲ

​ಪ್ರಜಾವಾಣಿ ವಾರ್ತೆ
Published 7 ಮೇ 2025, 13:23 IST
Last Updated 7 ಮೇ 2025, 13:23 IST
ಲಕ್ಷ್ಮೇಶ್ವರ ತಾಲ್ಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು
ಲಕ್ಷ್ಮೇಶ್ವರ ತಾಲ್ಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದರು   

ಲಕ್ಷ್ಮೇಶ್ವರ: ‘ಭಾರತೀಯ ಸೈನ್ಯ ಇದೀಗ ಬಲಿಷ್ಠವಾಗಿದ್ದು, ಯಾವುದೇ ರೀತಿಯ ಯುದ್ಧವನ್ನು ಯಶಸ್ವಿಯಾಗಿ ಮಾಡಲು ಸೈನಿಕರು ಸನ್ನದ್ಧರಾಗಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತಾಲ್ಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಬುಧವಾರ ಜರುಗಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಉಗ್ರರು ಪ್ರವಾಸಿಗರನ್ನು ಹತ್ಯೆ ಮಾಡುವ ಮೂಲಕ ಕಾಶ್ಮೀರದಂಥ ನಂದನವನದಲ್ಲಿ ನರಕವನ್ನಾಗಿ ಮಾಡಿದ್ದನ್ನು ಭಾರತೀಯರು ಕ್ಷಮಿಸಲು ಸಾಧ್ಯವೇ ಇಲ್ಲ. ದೇಶದಲ್ಲಿ ಅಗಾಧವಾದ ಮಿಲಿಟರಿ ಸಾಮರ್ತ್ಯ ಹೊಂದಿದೆ ಎಂಬುದಕ್ಕೆ ಮಂಗಳವಾರ ಯೋಧರು ದಾಳಿಯೇ ಸಾಕ್ಷಿ. ಮಾಡಿದ 21 ಉಗ್ರರ ಶಿಬಿರಗಳೇ ಸಾಕ್ಷಿಯಾಗಿವೆ. ಯುದ್ಧದ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಯೋಧರಿಗೆ ನೈತಿಕ ಬಲ ತುಂಬಬೇಕು’ ಎಂದರು.

ADVERTISEMENT

‘ಸಾಕಷ್ಟು ಬೆಳವಣಿಗೆ ಹೊಂದಿರುವ ಸಹಕಾರಿ ಕ್ಷೇತ್ರ ಇನ್ನೂ ಕೆಲ ಸಮಸ್ಯೆಗಳನ್ನು ಎದುರಿಸುತ್ತಿದೆ. ಸರ್ಕಾರ ಬ್ಯಾಂಕ್‌ಗಳಿಗೆ ನೀಡುವಷ್ಟು ಪ್ರೋತ್ಸಾಹವನ್ನು ಸಹಕಾರಿ ಸಂಘಗಳಿಗೆ ನೋಡುತ್ತಿಲ್ಲ. ಈವರೆಗೆ ಯಾವುದೇ ಸರ್ಕಾರ ಇರಲಿ ರೈತರ ಸಾಲಮನ್ನಾ ಮಾಡಿದ್ದು, ಕೇವಲ ₹2 ಲಕ್ಷ ಕೋಟಿ ಆದರೆ ಕೇವಲ
4 ವರ್ಷಗಳಲ್ಲಿ ದೇಶದ 751 ಶ್ರೀಮಂತ ಉದ್ಯಮಿಗಳ ₹11 ಲಕ್ಷ ಕೋಟಿ ಸಾಲವನ್ನು ಸರ್ಕಾರ ಮನ್ನಾ ಮಾಡಿದೆ. ದೇಶದ ಒಟ್ಟು ಆಸ್ತಿಯಲ್ಲಿ ಶೇ 70ರಷ್ಟು ಭಾಗ ಆಸ್ತಿ ಶೇ 17 ಜನರ ಹತ್ತಿರ ಇವೆ’ ಎಂದು ಹೇಳಿದರು.

‘ರಾಜ್ಯದ ಮಹಿಳೆಯರಲ್ಲಿ ಧೈರ್ಯ ತುಂಬಿ ಅವರನ್ನು ಸಬಲರನ್ನಾಗಿ ಮಾಡುವ ದೃಷ್ಟಿಯಿಂದ ಗೃಹಲಕ್ಷ್ಮೀ ಸೇರಿದಂತೆ ಐದು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯು ಮಹಿಳೆಯರಲ್ಲಿ ಆರ್ಥಿಕ ಜಾಗೃತಿ ಮೂಡಿಸಿದ್ದು ಸುಳ್ಳಲ್ಲ. ರಾಜ್ಯದ ಬಡ ಕುಟುಂಬಕ್ಕೆ ಪ್ರತಿ ತಿಂಗಳು ಐದು ಸಾವಿರ ರೂಪಾಯಿ ಕೊಡುತ್ತಿದ್ದೇವೆ’ ಎಂದರು.

ಸಾನ್ನಿಧ್ಯ ವಹಿಸಿದ್ದ ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ‘ಸಹಕಾರಿ ಕ್ಷೇತ್ರ ಇನ್ನೂ ಬೆಳೆಯಬೇಕಾಗಿದ್ದು ಅದಕ್ಕೆ ಸರ್ಕಾರದಿಂದ ಪ್ರೋತ್ಸಾಹದ ಅಗತ್ಯ ಇದೆ. ಸದಸ್ಯರು ಸಂಘ ಸಂಸ್ಥೆಗಳಿಂದ ಪಡೆದ ಸಾಲವನ್ನು ಸಮಯಕ್ಕೆ ಸರಿಯಾಗಿ ಪಾವತಿ ಮಾಡುವ ಮೂಲಕ ಅವುಗಳನ್ನು ಬಲಪಡಿಸಬೇಕು’ ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಮಹಾಂತೇಶ ಹವಳದ ಅಧ್ಯಕ್ಷತೆ ವಹಿಸಿದ್ದರು. ಚನ್ನಪ್ಪ ಹಳಮನಿ

ಮುಕ್ತಿಮಂದಿರದ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ, ಗಂಜಿಗಟ್ಟಿಯ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ, ಬನ್ನಿಕೊಪ್ಪ ಜಪದಕಟ್ಟಿಮಠದ ಡಾ.ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ, ಸಂಕದಾಳ ಸ್ವಾಮೀಜಿ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ಜಿ.ಎಸ್. ಗಡ್ಡದೇವರಮಠ, ಎಸ್.ಪಿ. ಬಳಿಗಾರ, ಚನ್ನಪ್ಪ ಜಗಲಿ, ಫಕ್ಕೀರೇಶ ಮ್ಯಾಟಣ್ಣವರ, ಜಿ.ವಿ. ಪಾಟೀಲ, ಗದಿಗೆಪ್ಪ ಯತ್ನಳ್ಳಿ, ಎಸ್.ಪಿ. ಪಾಟೀಲ, ವೀರೇಂದ್ರಗೌಡ ಪಾಟೀಲ, ನಾಗರಾಜ ಮಡಿವಾಳರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.