
ಗಜೇಂದ್ರಗಡ: ‘ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ₹8.60 ಕೋಟಿ ಅನುದಾನ ಮಂಜೂರು ಮಾಡಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಕಾಲಕಾಲೇಶ್ವರ ರಸ್ತೆಯಲ್ಲಿನ ಸರ್ಕಾರಿ ಗುಡ್ಡದ ಅಡಿಯಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
‘2017ರಲ್ಲಿ ಗಜೇಂದ್ರಗಡ ನೂತನ ತಾಲ್ಲೂಕು ಕೇಂದ್ರವಾಗಿ ಘೋಷಣೆ ಆಗಿದೆ. ಪಟ್ಟಣದಲ್ಲಿ ಭೂಮಿ ಸಿಗದ ಕಾರಣ ರಾಜೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಗುಡ್ಡದ 18 ಸಾವಿರ ಚದರ ಅಡಿ ಜಾಗದಲ್ಲಿ ಪ್ರಜಾಸೌಧ ನಿರ್ಮಾಣವಾಗಲಿದೆ’ ಎಂದರು.
ಮುಖಂಡ ಹೆಚ್.ಎಸ್.ಸೋಂಪುರ, ಪುರಸಭೆ ಮಾಜಿ ಸದಸ್ಯ ರಾಜು ಸಾಂಗ್ಲೀಕರ, ಶಿವರಾಜ ಘೋರ್ಪಡೆ ಮಾತನಾಡಿದರು. ಪುರಸಭೆ ಮಾಜಿ ಅಧ್ಯಕ್ಷ ಸುಭಾಸ್ ಮ್ಯಾಗೇರಿ, ಮಾಜಿ ಸದಸ್ಯ ಮುರ್ತುಜಾ ಡಾಲಾಯತ್, ರಾಜೂರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶರಣಪ್ಪ ಸಜ್ಜನರ, ಸಿದ್ದಪ್ಪ ಬಂಡಿ, ವೀರಣ್ಣ ಶೆಟ್ಟರ್, ತಾರಾಸಿಂಗ್ ರಾಠೋಡ, ಶ್ರೀಧರ್ ಬೀದರಳ್ಳಿ, ಈಶಪ್ಪ ರಾಠೋಡ, ಯೂಸುಫ್ ಇಟಗಿ, ಸಿದ್ದಪ್ಪ ಚೋಳಿನ, ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಕಂದಕೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.