ಮುಳಗುಂದ: ಪಟ್ಟಣ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಮಳೆ ಸುರಿದ ಪರಿಣಾಮ ವಾರದ ಸಂತೆಗೆ ತೊಂದರೆಯಾಯಿತು.
ಸಂಜೆ 2 ಗಂಟೆ ಕಾಲ ಬಿರುಸಾದ ಮಳೆ ಸುರಿಯಿತು. ಚರಂಡಿಗಳು ತುಂಬಿ ಹರಿದವು. ಎಪಿಎಂಸಿ ಆವರಣದಲ್ಲಿ ಸಾಕಷ್ಟು ಪ್ರಮಾಣದ ನೀರು ತುಂಬಿತು. ತರಕಾರಿ ವ್ಯಾಪಾರಸ್ಥರು, ಗ್ರಾಹಕರು ಪರದಾಡಿದರು. ಜೋರು ಮಳೆಯಿಂದಾಗಿ ಕೃಷಿ ಬಿತ್ತನೆ ಕಾರ್ಯ ಸ್ಥಗಿತಗೊಂಡು ರೈತರು ಮನೆಯತ್ತ ಮರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.