
ಪ್ರಜಾವಾಣಿ ವಾರ್ತೆ
ಗಜೇಂದ್ರಗಡ: ಪಟ್ಟಣದ ವಿವಿಧ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆ ಸಂಘಟನೆಗಳಲ್ಲಿ ಸೋಮವಾರ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.
ಪಟ್ಟಣದ ಜಗದಂಬಾ ವಿದ್ಯಾವರ್ಧಕ ಸಂಘದ ವಿ.ಟಿ. ರಾಯಬಾಗಿ ಇಂಗ್ಲಿಷ್ ಮಾಧ್ಯಮ ಶಾಲೆ, ಸಿಪಿಐಎಂ ಕಚೇರಿ, ಭಗವಾನ್ ಮಹಾವೀರ ಜೈನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಅಂಜುಮನ್ ಉರ್ದು ಶಾಲೆ, ಭಗವಾನ್ ಮಹಾವೀರ ಜೈನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಸಮೀಪದ ಪುರ್ತಗೇರಿ ಗ್ರಾಮದ ಬ್ರೈಟ್ ಬಿಗಿನಿಂಗ್ ಇಂಗ್ಲಿಷ್ ಮಾಧ್ಯಮ ಶಾಲೆ ಸೇರಿದಂತೆ ವಿವಿಧೆಡೆ ಗಣರಾಜ್ಯೋತ್ಸವ ಆಚರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.