
ಪ್ರಜಾವಾಣಿ ವಾರ್ತೆ
ನರೇಗಲ್: ಹೋಬಳಿಯ ಮಾರನಬಸರಿ, ಜಕ್ಕಲಿ, ಹಾಲಕೆರೆ, ನಿಡಗುಂದಿ, ನಿಡಗುಂದಿಕೊಪ್ಪ, ಅಬ್ಬಿಗೇರಿ, ಕಳಕಾಪುರ, ಬೂದಿಹಾಳ, ಹೊಸಳ್ಳಿ, ಯರೇಬೇಲೇರಿ, ಡ.ಸ.ಹಡಗಲಿ ಸೇರಿದಂತೆ ವಿವಿಧೆಡೆ ಸೋಮವಾರ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.
ಸ್ಥಳೀಯ ಪಟ್ಟಣ ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯಾಧಿಕಾರಿ ಮಲ್ಲೇಶ ಪಚ್ಚಿ ಮಾತನಾಡಿದರು.
ಸರ್ಕಾರಿ ಪಿಯು ಕಾಲೇಜು: ಸ್ಥಳೀಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಭೂದಾನಿ ಆನಂದ ಕುಲಕರ್ಣಿ, ಪ್ರಾಚಾರ್ಯ ಎಸ್. ಜಿ. ಗುಳಗಣ್ಣವರ, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಶ್ವರ್ಯ ನಾಗರಾಳ, ಗೃಹರಕ್ಷಕ ದಳ ಸಿಬ್ಬಂದಿ, ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.