
ಪ್ರಜಾವಾಣಿ ವಾರ್ತೆ
ರೋಣ (ಗದಗ): ಇಲ್ಲಿಗೆ ಸಮೀಪದ ಜಿಗಳೂರು ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಕ್ರಷರ್ ಮತ್ತು ಕ್ಯಾಂಟರ್ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 15 ಜನ ಮಹಿಳಾ ಕೂಲಿಕಾರ್ಮಿಕರು ಗಾಯಗೊಂಡಿದ್ದಾರೆ.
ಮೃತಪಟ್ಟವರನ್ನು ಗಜೇಂದ್ರಗಡ ಪಟ್ಟಣದ ಶಿವಾಜಿಪೇಟೆಯ ನಿವಾಸಿಗಳಾದ ಮರಿಯಂ ಹುನಗುಂದ (55), ಅನ್ನಪೂರ್ಣ ಚಂಗಳಿ (45), ಸುಜಾತ ಹೊಸಮನಿ (30) ಎಂದು ಗುರುತಿಸಲಾಗಿದೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಉಳಿದ 13 ಗಾಯಾಳು ಕೂಲಿ ಕಾರ್ಮಿಕರನ್ನು ರೋಣದ ಭೀಮಸೇನ ಜೋಶಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.