ರೋಣ: ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಗದಗ–ಬಾದಾಮಿ ಪ್ರಮುಖ ರಸ್ತೆಯ ಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಪುರಸಭೆ 19ನೇ ವಾರ್ಡ್ ಸದಸ್ಯ ಬಾವಾಸಾಬ್ ಬೆಟಗೇರಿ ಮತ್ತು ಅಂಗಡಿಗಳ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದರು.
ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಚರಂಡಿ ಸಂಪೂರ್ಣ ಹೂಳು ತುಂಬಿದ್ದರಿಂದ ಪುರಸಭೆ ಸಿಬ್ಬಂದಿ ಸ್ವಚ್ಛಗೊಳಿಸಲು ಚರಂಡಿ ಮೇಲ್ಬಾಗದಲ್ಲಿರುವ ಹಲವು ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರು.
ಈ ವೇಳೆ ಮಧ್ಯೆ ಪ್ರವೇಶಿಸಿದ ಈ ವೇಳೆ ಮಧ್ಯೆ ಪ್ರವೇಶಿಸಿದ ಪುರಸಭೆಯ 19ನೇ ವಾರ್ಡ್ ಸದಸ್ಯ ಬಾವಾಸಾಬ್ ಬೆಟಗೇರಿ ಅವರು, ಅಂಗಡಿ ಮಾಲೀಕರ ಹಾಗೂ ವಾರ್ಡ್ ಸದಸ್ಯರ ಗಮನಕ್ಕೆ ತರದೆ ಅಂಗಡಿಗಳ ತೆರವಿಗೆ ಸೂಚಿಸಿದವರು ಯಾರು? ಕೂಡಲೇ ತೆರವು ಕಾರ್ಯಾಚರಣೆ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.
ಪ್ರತಿಕ್ರಿಸಿದ ಸ್ವಚ್ಛತಾ ಸಿಬ್ಬಂದಿ ‘ಅಂಗಡಿ ಮಾಲೀಕರಿಗೆ ತಳ್ಳುಗಾಡಿಯ ಮೂಲಕ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ’ ಎಂದರು.
ಈ ವೇಳೆ ಮಾಲೀಕರು ಮತ್ತು ಸಿಬ್ಬಂದಿ ಮಧ್ಯೆ ಪರಸ್ಪರ ತಳ್ಳಾಟ ನಡೆಯಿತು. ಮಧ್ಯೆ ಪ್ರವೇಶಿಸಿದ ಪುರಸಭೆ ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ ಮತ್ತು ಸದಸ್ಯ ಬಾವಾಸಾಬ್ ಬೆಟಗೇರಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಅಂಗಡಿ ತೆರವುಗೊಳಿಸಿ ಚರಂಡಿ ಸ್ವಚ್ಛಗೊಳಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.