ADVERTISEMENT

ರೋಣ: 2ಸಾವಿರ ಸಸಿ ನೆಟ್ಟು ಜನ್ಮ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 15:41 IST
Last Updated 10 ಏಪ್ರಿಲ್ 2025, 15:41 IST
ರೋಣ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜಿ.ಎಸ್.ಪಾಟೀಲ ಅವರ ಜನ್ಮದಿನದ ಅಂಗವಾಗಿ  ಸಸಿ ನೆಡಲಾಯಿತು
ರೋಣ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜಿ.ಎಸ್.ಪಾಟೀಲ ಅವರ ಜನ್ಮದಿನದ ಅಂಗವಾಗಿ  ಸಸಿ ನೆಡಲಾಯಿತು   

ರೋಣ: ‘ವಾತಾವರಣದಲ್ಲಿ ಉತ್ತಮ ಗಾಳಿ ದೊರೆಯಬೇಕಾದರೆ ಗಿಡ–ಮರಗಳ ಪಾತ್ರ ‌ಮುಖ್ಯವಾಗಿದೆ. ಆದ್ದರಿಂದ ಜಿ.ಎಸ್.ಪಾಟೀಲ ಅವರ ಜನ್ಮದಿನದ ಅಂಗವಾಗಿ ತಾಲೂಕಿನಾದ್ಯಂತ 2,000 ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದೆ’ ಎಂದು ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ ಹೇಳಿದರು.

ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಗುರುವಾರ ರೋಣ ಶಾಸಕ ಜಿ.ಎಸ್.ಪಾಟೀಲ ಅವರ ಜನ್ಮದಿನದ ಅಂಗವಾಗಿ ಸಸಿ ನೆಟ್ಟು ಮಾತನಾಡಿದರು.

‘ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿರುವ ಪಾಟೀಲರು ಹಲವು ಯೋಜನೆಗಳನ್ನು ಪಟ್ಟಣದಲ್ಲಿ ಜಾರಿಗೊಳಿಸಿದ್ದಾರೆ. ಜಿಗಳೂರ ಕೆರೆ ಪಕ್ಕದಲ್ಲಿ ಈಗಾಗಲೇ ಟ್ರೀ ಪಾರ್ಕ್ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ’ ಎಂದರು.

ADVERTISEMENT

ಪುರಸಭೆ ಸದಸ್ಯ ಸಂಗಪ್ಪ ಜಿಡ್ಡಿಬಾಗಿಲ, ಕಾಂಗ್ರೆಸ್ ಮುಖಂಡರಾದ ರವಿ ಸಂಗನಬಶೆಟ್ಟರ, ಸಂಜಯ ದೊಡ್ಡಮನಿ, ನಿಂಬಣ್ಣ ಗಾಣಗೇರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.