ADVERTISEMENT

ರೋಣ | 'ಕಣ್ಣಿನ ರಕ್ಷಣೆಗೆ ನಿಷ್ಕಾಳಜಿ ಬೇಡ'

ಉಚಿತ ನೇತ್ರ ತಪಾಸಣೆ ಶಿಬಿರ: ಡಾ.ಎಸ್.ಬಿ. ಲಕ್ಕೋಳ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 2:54 IST
Last Updated 30 ಜುಲೈ 2025, 2:54 IST
ರೋಣ ಪಟ್ಟಣದ ರಾಜೀವ್ ಗಾಂಧಿ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣೆ, ಗಾಜಿನ ಬಿಂದು ಅಳವಡಿಕೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಸೋಮವಾರ ಗಣ್ಯರು ಉದ್ಘಾಟಿಸಿದರು
ರೋಣ ಪಟ್ಟಣದ ರಾಜೀವ್ ಗಾಂಧಿ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣೆ, ಗಾಜಿನ ಬಿಂದು ಅಳವಡಿಕೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಸೋಮವಾರ ಗಣ್ಯರು ಉದ್ಘಾಟಿಸಿದರು   

ರೋಣ: ‘ಮನುಷ್ಯನಿಗೆ ಪಂಚೇಂದ್ರಿಯಗಳು ಅತ್ಯಂತ ಪ್ರಮುಖವಾಗಿದ್ದು, ನೇತ್ರಗಳ ರಕ್ಷಣೆ ಅತ್ಯಂತ ಅವಶ್ಯಕವಾಗಿದೆ. ಯಾವುದೇ ಕಾರಣಕ್ಕೂ ನೇತ್ರ ರಕ್ಷಣೆ ವಿಷಯದಲ್ಲಿ ನಿಷ್ಕಾಳಜಿ ಬೇಡ’ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕಟದ ಮಾಜಿ ಅಧ್ಯಕ್ಷ ಡಾ.ಎಸ್.ಬಿ. ಲಕ್ಕೋಳ ಹೇಳಿದರು.

ಪಟ್ಟಣದ ರಾಜೀವ್ ಗಾಂಧಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಬಸಮ್ಮ ಪಾಟೀಲ ಅವರ 21ನೇ ಪುಣ್ಯ ಸ್ಮರಣೆ ಅಂಗವಾಗಿ ಸೋಮವಾರ ನಡೆದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದ ಅವರು, ‘ಕಣ್ಣುಗಳ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ‘ತಾಯಿಯವರ ಸ್ಮರಣಾರ್ಥವಾಗಿ ಕಳೆದ 21 ವರ್ಷಗಳಿಂದ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗಿದ್ದು, ನೇತ್ರ ಚಿಕಿತ್ಸೆ ಹಾಗೂ ಹೃದಯ ಸಂಬಂಧಿ ರೋಗಗಳ ಚಿಕಿತ್ಸೆಗಾಗಿ ಅವಕಾಶ ಕಲ್ಪಿಸಲಾಗಿದೆ. ಈ ವರ್ಷ ಉಚಿತವಾಗಿ ಹೆಣ್ಣು ಮಕ್ಕಳಿಗೆ ಎಚ್‌ಪಿವಿ ಲಸಿಕೆ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.

ADVERTISEMENT

ಬಿ.ಎಸ್. ಪಾಟೀಲ, ಡಾ.ಕೆ.ಬಿ. ಧನ್ನೂರ, ಐ.ಎಸ್. ಪಾಟೀಲ, ವ್ಹಿ.ಆರ್. ಗುಡಿಸಾಗರ, ದಶರಥ ಗಾಣಿಗೇರ, ಮಿಥುನ ಪಾಟೀಲ, ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ರಮೇಶ ಪಲ್ಲೇದ, ಉಪಾಧ್ಯಕ್ಷ ಯಚ್ಚರಗೌಡ ಗೋವಿಂದಗೌಡ್ರ, ಮಾಜಿ ಎಪಿಎಂಸಿ ಅಧ್ಯಕ್ಷ ಪರಶುರಾಮ ಅಳಗವಾಡಿ, ಸಿದ್ದಣ್ಣ ಬಂಡಿ, ಅಭಿಷೇಕ ನವಲಗುಂದ, ವ್ಹಿ.ಬಿ.ಸೋಮನಕಟ್ಟಿಮಠ, ವೀರಭದ್ರಗೌಡ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.