ADVERTISEMENT

ರೋಣ | ಶಾಸಕ ಪಾಟೀಲಗೆ ಸಚಿವ ಸ್ಥಾನ ನೀಡಿ: ನಿಂಗಪ್ಪ ಹೊನ್ನಾಪುರ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 4:57 IST
Last Updated 24 ನವೆಂಬರ್ 2025, 4:57 IST
ರೋಣ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅಹಿಂದ ಯುವ ಸೇನೆ ರಾಜ್ಯ ಘಟಕ ಅಧ್ಯಕ್ಷ ನಿಂಗಪ್ಪ ಹೊನ್ನಾಪುರ ಮಾತನಾಡಿದರು 
ರೋಣ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅಹಿಂದ ಯುವ ಸೇನೆ ರಾಜ್ಯ ಘಟಕ ಅಧ್ಯಕ್ಷ ನಿಂಗಪ್ಪ ಹೊನ್ನಾಪುರ ಮಾತನಾಡಿದರು    

ರೋಣ: ‘ಜಿಲ್ಲೆಗೆ ಒಂದೇ ಸಚಿವ ಸ್ಥಾನ ಎಂದು ಪಕ್ಷದ ಮುಖಂಡರು ನಿರ್ಧರಿಸಿದರೆ ಕಾಂಗ್ರೆಸ್ ಕಾರ್ಯಕರ್ತರ ಭಾವನೆಗೆ ಬೆಲೆಕೊಟ್ಟು ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ದೊರಕಲು ಎಚ್.ಕೆ. ಪಾಟೀಲ ಅವರು ಸಚಿವ ಸ್ಥಾನ ತ್ಯಾಗ ಮಾಡಬೇಕು’ ಎಂದು ಅಹಿಂದ ಯುವ ಸೇನೆ ರಾಜ್ಯ ಘಟಕ ಅಧ್ಯಕ್ಷ ನಿಂಗಪ್ಪ ಹೊನ್ನಾಪುರ ಹೇಳಿದರು.

ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕ ಜಿ.ಎಸ್. ಪಾಟೀಲ ಅವರು ಐದು ಬಾರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಿ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಒಂದು ವೇಳೆ ನೀಡದಿದ್ದಲ್ಲಿ ಡಿಸೆಂಬರ್ 5ರಂದು ಪಟ್ಟಣದಲ್ಲಿ ಹೋರಾಟ ನಡೆಸಬೇಕಾಗುತ್ತದೆ’ ಎಂದರು.

ರಾಜೀವ್ ಗಾಂಧಿ ಪಂಚಾಯಿತಿ ಸಂಘಟನೆ ತಾಲ್ಲೂಕು ಘಟಕ ಅಧ್ಯಕ್ಷ ಉಮೇಶ ರಾಠೋಡ ಮಾತನಾಡಿ, ‘ರೋಣ ಹಾಗೂ ಗಜೇಂದ್ರಗಡ ತಾಲ್ಲೂಕುಗಳ ಅಭಿವೃದ್ಧಿಗೆ ಶಾಸಕರ ಕೊಡುಗೆ ಅಪಾರ. ಹಲವು ಬಾರಿ ಸಚಿವರಾದ ಎಚ್.ಕೆ. ಪಾಟೀಲ ಅವರನ್ನು ವಿಧಾನಸಭೆ ಸಬಾಪತಿಯಾಗಿ ನೇಮಿಕಗೊಳಿಸಿ, ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.

ADVERTISEMENT

ಈರಣ್ಣ ಕೊತಬಾಳ, ಕಳಕಪ್ಪ ಜಾಡಬಂಡಿ, ರಾಜು ನಾಯಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.