
ರೋಣ: ಪುರಸಭೆಯ 2ನೇ ಅವಧಿಗೆ ಆಯ್ಕೆಯಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಉಳಿದ ಅವಧಿಗಾಗಿ ನೂತನ ಅಧ್ಯಕ್ಷರಾಗಿ ಬಸಮ್ಮ ಕೊಪ್ಪದ, ಉಪಾಧ್ಯಕ್ಷರಾಗಿ ಹನುಮಂತ ತಳ್ಳಿಕೇರಿ ಬುಧವಾರ ಆಯ್ಕೆಯಾದರು.
ರೋಣ ತಹಶೀಲ್ದಾರ್ ನಾಗರಾಜ.ಕೆ ನೇತೃತ್ವದಲ್ಲಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನಿರೀಕ್ಷೆಯಂತೆಯೇ ಆಯ್ಕೆ ನಡೆಯಲಾಗಿದೆ. ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪುರಸಭೆಯ 18ನೇ ವಾರ್ಡ್‌ನ ಸದಸ್ಯೆ ಬಸಮ್ಮ ಕೊಪ್ಪದ ಮತ್ತು ಪರಿಶಿಷ್ಟ ಜಾತಿ ಪುರುಷ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ 22ನೇ ವಾರ್ಡ್ ಸದಸ್ಯ ಹನುಮಂತ ತಳ್ಳಿಕೇರಿ ಮಾತ್ರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಪರಿಶೀಲಿಸಿದ ಚುನಾವಣಾ ಅಧಿಕಾರಿ ಅಂತಿಮವಾಗಿ ಇಬ್ಬರೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರುಗಳಿಗೆ ಪುರಸಭೆಯ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೂಮಾಲೆ ಹಾಕಿ ಶುಭಾಶಯ ಕೋರಿದರು.
ರೋಣ ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ, ಮಾಜಿ ಅಧ್ಯಕ್ಷೆ ರಂಗಮ್ಮ ಭಜಂತ್ರಿ, ನಿಕಟ ಪೂರ್ವ ಉಪಾಧ್ಯಕ್ಷ ದುರಗಪ್ಪ ಹಿರೇಮನಿ, ಸದಸ್ಯರುಗಳಾದ ಮಲ್ಲಯ್ಯ ಮಹಾಪುರುಷಮಠ, ಗದಿಗೆಪ್ಪ ಕಿರೇಸೂರ, ಬಾವಸಾಬ ಬೆಟಗೇರಿ, ಈಶ್ವರ ಕಡಬಿನಕಟ್ಟಿ, ಮುತ್ತಣ್ಣ ಗಡಗಿ, ದಾವಲಸಾಬ ಬಾಡಿನ, ಶಕುಂತಲಾ ಚಿತ್ರಗಾರ, ವಿದ್ಯಾ ದೊಡ್ಡಮನಿ, ಸಂಗಪ್ಪ ಜಿಡ್ಡಿಬಾಗಿಲ ಮುಖ್ಯಾಧಿಕಾರಿ ರಮೇಶ ಹೊಸಮನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.