
ಪ್ರಜಾವಾಣಿ ವಾರ್ತೆ
ಗದಗ: ಇಲ್ಲಿನ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ ನೈಪುಣ್ಯ ಕೇಂದ್ರ (ಪ್ಲೇಸ್‌ಮೆಂಟ್ ಸೆಲ್) ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವವಿದ್ಯಾಲಯದಲ್ಲಿ ವಿವಿಧ ಸ್ನಾತಕೋತ್ತರ ಪದವಿಗಳನ್ನು ಮುಗಿಸಿದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ನವೆಂಬರ್ 7ರಂದು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಸುರೇಶ್ ವಿ. ನಾಡಗೌಡರ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.