ADVERTISEMENT

ಶಿಕ್ಷಣದ ಜತೆಗೆ ಜೀವನ ಕೌಶಲ ಅಳವಡಿಸಿಕೊಳ್ಳಿ

ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಸಲಹೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 2:39 IST
Last Updated 13 ಅಕ್ಟೋಬರ್ 2020, 2:39 IST
ಯತೀಶ್‌ ಎನ್‌.
ಯತೀಶ್‌ ಎನ್‌.   

ಗದಗ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಹಾಗೂ ಗದಗ ಜಿಲ್ಲಾ ಸಿಡಾಕ್ ಕಚೇರಿ ಸಹಯೋಗದಲ್ಲಿ ಅನನ್ಯ ನಗರ ಹಾಗೂ ಗ್ರಾಮೀಣಾಭಿವೃದ್ಧಿ ವಿವಿಧೋದ್ದೇಶಗಳ ಸಂಸ್ಥೆಯಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಉದ್ಘಾಟಿಸಿದರು.

‘ಪ್ರತಿಯೊಬ್ಬರ ಜೀವನದಲ್ಲೂ ಮುಂದೆ ಒಂದು ಗುರಿ, ಹಿಂದೆ ಒಬ್ಬ ಗುರು ಇರಬೇಕು. ಆಗ ಮಾತ್ರ ಯಶಸ್ಸು ಸಾಧಿಸಬಹುದು. ಶಿಕ್ಷಣದ ಜೊತೆಗೆ ಜೀವನ ಕೌಶಲಗಳನ್ನು ಬದುಕಿನುದ್ದಕ್ಕೂ ಅಳವಡಿಸಿಕೊಳ್ಳಬೇಕು. ತರಬೇತಿಯ ಸದುಪಯೋಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು.

ಸಿಡಾಕ್ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಅಂಗಡಿ ಮಾತನಾಡಿ, ‘ನೂತನ ಉದ್ಯಮಗಳ ಆಯ್ಕೆ ಮಾಡಿಕೊಳ್ಳಬೇಕು. ಉದ್ಯಮಿಗಳಾಗಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು’ ಎಂದರು.

ADVERTISEMENT

ಉದ್ಯಮಿ ರಮೇಶ ಹತ್ತಿಕಾಳ, ಜಿಲ್ಲಾ ಖಾದಿ ಗ್ರಾಮೋದ್ಯೊಗ ಅಧಿಕಾರಿ ಎಸ್.ಎಂ.ಹಂಚಿನಮನಿ ಇದ್ದರು. ಮಂಜುನಾಥ ಮುಳಗುಂದ ನಿರೂಪಿಸಿದರು. ವಿಜಯಲಕ್ಷ್ಮಿ ನೆಲ್ಲೂರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.