ADVERTISEMENT

ಆರ್ಥಿಕ ಮಿತವ್ಯಯ ಆದೇಶ ಹಿಂಪಡೆಯಲು ಸಂಕನೂರ ಮನವಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 16:31 IST
Last Updated 20 ನವೆಂಬರ್ 2020, 16:31 IST

ಗದಗ: ‘ಕೋವಿಡ್–19 ಮತ್ತು ಪ್ರವಾಹ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿನ ನೇಮಕಾತಿಗಳಿಗೆ ವಿಧಿಸಿದ ಆರ್ಥಿಕ ಮಿತವ್ಯಯ ಆದೇಶವನ್ನು ಕೂಡಲೇ ಹಿಂಪಡೆಯಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

‘ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ನಿರುದ್ಯೋಗಿ ಪದವೀಧರರ ವಯೋಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ವಿಧಿಸಿದ ಆರ್ಥಿಕ ಮಿತವ್ಯಯ ಮಾರಕವಾಗಿದ್ದು, ಸಾಕಷ್ಟು ಪದವೀಧರರಿಗೆ ಅನ್ಯಾಯವಾಗಲಿದೆ. ಸರ್ಕಾರಕ್ಕೆ ತೊಂದರೆ ಆಗಲಾರದ ಹಾಗೆ ಕೆಲವೊಂದು ಕರಾರುಗಳನ್ನು ವಿಧಿಸಿ ತಡೆಹಿಡಿದ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು. ಈಗಾಗಲೇ ನೇಮಕಾತಿಗಳಾದ ಹುದ್ದೆಗಳನ್ನು ಅನುಮೋದನೆ ಮಾಡುವಂತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆ ಆದನಂತರ ವೇತನ ಬಿಡುಗಡೆ ಮಾಡುವ ಷರತ್ತಿನೊಂದಿಗೆ ನೇಮಕಾತಿಗಳಿಗೆ ಅನುಮೋದನೆ ನೀಡಬೇಕು’ ಎಂದು ಕೋರಿದ್ದಾರೆ.

ADVERTISEMENT

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.