ಗದಗ: ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರೌಢಶಾಲಾ ಅತಿಥಿ ಶಿಕ್ಷಕರ ಐದು ತಿಂಗಳ ಬಾಕಿ ವೇತನವನ್ನು ಒಂದು ವಾರದಲ್ಲಿ ಬಿಡುಗಡೆ ಮಾಡಲು ಸರ್ಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ತಿಳಿಸಿದ್ದಾರೆ.
‘2023-24ನೇ ಸಾಲಿನ ಆಗಸ್ಟ್‌ನಿಂದ ಡಿಸೆಂಬರ್‌ವರೆಗೆ ವಿವಿಧ ಜಿಲ್ಲೆಗಳ ಪ್ರೌಢಶಾಲಾ ಅತಿಥಿ ಶಿಕ್ಷಕರ ಬಾಕಿ ವೇತನ ಆರ್ಥಿಕ ಇಲಾಖೆಯಿಂದ ಬಿಡುಗಡೆ ಆಗದ ಕಾರಣದಿಂದ ಸಾವಿರಾರು ಶಿಕ್ಷಕರು ಮತ್ತು ಕುಟುಂಬದವರು ದಿನನಿತ್ಯ ಜೀವನ ಸಾಗಿಸಲು ಕಷ್ಟಪಡುತ್ತಿದ್ದರು. ಈ ಹಿನ್ನಲೆಯಲ್ಲಿ ತಕ್ಷಣ ವೇತನ ಅನುದಾನ ಬಿಡುಗಡೆ ಮಾಡಿ, ಶಿಕ್ಷಕರು ಮಕ್ಕಳಿಗೆ ಪಾಠ ಬೋಧನೆ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿಗೆ ಒತ್ತಾಯಿಸಲಾಗಿತ್ತು’ ಎಂದು ತಿಳಿಸಿದ್ದಾರೆ.
‘ನಮ್ಮ ಮನವಿಗೆ ಸ್ಪಂದಿಸಿರುವ ಹಣಕಾಸು ಇಲಾಖೆ ಒಂದು ವಾರದಲ್ಲಿ ಹಣಬಿಡುಗಡೆ ಮಾಡಲು ಕ್ರಮವಹಿಸುವ ಭರವಸೆ ನೀಡಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.