ADVERTISEMENT

ಗದಗ: ಸಂತ ಸೇವಾಲಾಲ ಜಯಂತಿ ಫೆ.28 ರಂದು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 8:34 IST
Last Updated 27 ಫೆಬ್ರುವರಿ 2026, 8:34 IST
<div class="paragraphs"><p>ಹುಣಸಗಿ ಪಟ್ಟಣದಲ್ಲಿ ಸಂತ ಸೇವಾಲಾಲ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು</p></div>

ಹುಣಸಗಿ ಪಟ್ಟಣದಲ್ಲಿ ಸಂತ ಸೇವಾಲಾಲ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು

   

ನರೇಗಲ್:‌ ಪಟ್ಟಣದ ಬಂಜಾರ (ಲಂಬಾಣಿ) ಸಮಾಜದ ವತಿಯಿಂದ 3ನೇ ವಾರ್ಡ್‌ ಆಶ್ರಯ ಕಾಲೋನಿಯಲ್ಲಿ ಫೆ.28 ರಂದು ಬೆಳಿಗ್ಗೆ 11ಕ್ಕೆ ಸಂತ ಸೇವಾಲಾಲ ಜಯಂತಿ ಹಮ್ಮಿಕೊಳ್ಳಲಾಗಿದೆ.

ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಕೊಪ್ಪಳ ಬಹದ್ದೂರಬಂಡಾ ಬಂಜಾರ ಪೀಠದ ಗುರು ಗೋಸಾಯಿಬಾವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕರಾದ ಜಿ.ಎಸ್.‌ ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು. ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಮಿಥುನ್‌ ಜಿ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ADVERTISEMENT

ರಾಜ್ಯ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ಅಕ್ಷಯ ಐ. ಪಾಟೀಲ, ನಿವೃತ್ತ ಶಿಕ್ಷಕ ತಾರಾಸಿಂಗ್‌ ರಾಠೋಡ, ಕರ್ನಾಟಕ ಗೋರ ಸೇನಾ ರಾಜ್ಯ ಘಟಕ ಅಧ್ಯಕ್ಷ ರವಿಕಾಂತ ಅಂಗಡಿ, ದೇವಕ್ಕ ಎಸ್‌. ರಾಠೋಡ, ಪಿಎಸ್ಐ ಐಶ್ವರ್ಯ ನಾಗರಾಳ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಲ್ಲೇಶ ಪಚ್ಚಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.