
ಪ್ರಜಾವಾಣಿ ವಾರ್ತೆ
ಗದಗ: ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಎಸ್. ಲಾಡ್ ಫೆ.18ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.18ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ ಗದಗ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜತೆಗೆ ಸಭೆ ನಡೆಸುವರು. ಬಳಿಕ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗದಗ ಜಿಲ್ಲಾ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಬೆಳಿಗ್ಗೆ 11.30ಕ್ಕೆ ಮಾಲೀಕ ವರ್ಗದ ಸಂಘಟನೆಗಳು, ಆಡಳಿತ ವರ್ಗದವರ ಜತೆಗೆ ಸಭೆ, ಮಧ್ಯಾಹ್ನ 12ಕ್ಕೆ ಕಾರ್ಮಿಕ ಸಂಘಟನೆಗಳ ಸಭೆ ನಡೆಸುವರು. ನಂತರ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಗದಗ ನಗರದಿಂದ ಧಾರವಾಡಕ್ಕೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.