
ಗದಗ: ‘ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಬೆಂಗಳೂರಿನಲ್ಲಿ ಬೇರೂರಿರುವ ಎಲ್ಲ ಐಎಫ್‌ಎಸ್ ಅಧಿಕಾರಿಗಳನ್ನೂ ಕಾಡಿಗೆ ಕಳಿಸಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
‘ಒಂದು ಹುಲಿ ಆಕಸ್ಮಿಕವಾಗಿ ತೀರಿಕೊಂಡರೂ ಅದು ದೊಡ್ಡ ವಿಚಾರ. ಹಾಗಿದ್ದಾಗ, ನಾಲ್ಕು ಮರಿ, ಒಂದು ತಾಯಿ ಹುಲಿ ತೀರಿಕೊಂಡಿವೆ. ಹುಲಿ ರಕ್ಷಿತ ಪ್ರದೇಶದಲ್ಲಿ ಜನದಟ್ಟಣೆಗೆ ಅವಕಾಶ ಮಾಡಿಕೊಡಲಾಗಿದೆ. ರೆಸಾರ್ಟ್‌ಗೆ ಅನುಮತಿ ನೀಡಲಾಗಿದೆ. ಇಷ್ಟೆಲ್ಲಾ ಆದರೂ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆ’ ಎಂದು ದೂರಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಮುಖ್ಯಮಂತ್ರಿ ಇದ್ದಾಗ ಎಲ್ಲ ಐಎಫ್‌ಎಸ್ ಅಧಿಕಾರಿಗಳನ್ನೂ ಕಾಡಿಗೆ ಕಳಿಸಿದ್ದೆ. ಕಚೇರಿಗಳನ್ನು ಸ್ಥಳಾಂತರ ಮಾಡಿದ್ದೆ. ಆದರೆ, ಈಗ ಮತ್ತೆ ಅವರೆಲ್ಲ ಬೆಂಗಳೂರಿಗೆ ಬಂದಿದ್ದಾರೆ’ ಎಂದು ಹರಿಹಾಯ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.