ಶಿರಹಟ್ಟಿ: ಕ್ರೀಡೆಗಳು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಬೆಳೆಸುವಲ್ಲಿ ಸಹಕಾರಿಯಾಗಲಿದ್ದು, ಪ್ರತಿಭೆ ಅನಾವರಣಕ್ಕೂ ಉತ್ತಮ ವೇದಿಕೆಯಾಗಿವೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಅಭಿಪ್ರಾಯಪಟ್ಟರು.
ಸ್ಥಳೀಯ ಎಸ್.ಎಂ.ಡಬಾಲಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ 2025-26ಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾಲೇಜು ವಿದ್ಯಾರ್ಥಿಗಳು ಸೋಲು-ಗೆಲುವಿನ ಬಗ್ಗೆ ಲೆಕ್ಕಾಚಾರ ಹಾಕದೇ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಮೂಡಿಸಲು ಉಪನ್ಯಾಸಕರು ಸಹ ಮುಂದಾಗಬೇಕು. ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಚೇರ್ಮನ್ ಹೊನ್ನಪ್ಪ ಶಿರಹಟ್ಟಿ, ನಾಗರಾಜ ಲಕ್ಕುಂಡಿ, ಶಂಕರ ಮರಾಠೆ, ಚಂದ್ರಕಾಂತ ನೂರಶೆಟ್ಟರ, ಕೆ.ಎ.ಬಳಿಗೇರ, ತಿಪ್ಪಣ್ಣ ಕೊಂಚಿಗೇರಿ, ರಾಮಣ್ಣ ಕಂಬಳಿ, ಶ್ರೀನಿವಾಸ ಕಪಟಕರ, ನಟರಾಜ ರಾನಡೆ, ಬಸವರಾಜ ವಡವಿ, ಗೌತಮ ಕಪ್ಪತ್ತನವರ, ನಟರಾಜ ರಾನಡೆ, ಪ್ರಾಚಾರ್ಯ ಎಂ.ಸಿ.ಭಜಂತ್ರಿ, ಬಸವರಾಜ ಗಿರಿತಮ್ಮಣ್ಣವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.