ಶಿರಹಟ್ಟಿ: ತಾಲ್ಲೂಕಿನ ಛಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಭೇಟಿ ನೀಡಿ ಪರಿಶೀಲಿಸಿದರು.
ಛಬ್ಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು ಆಹಾರದ ಗುಣಮಟ್ಟ, ಧಾನ್ಯಗಳ ಗುಣಮಟ್ಟ, ಬಿಸಿ ಊಟದ ಕೊಠಡಿ, ಎಸ್‌ಡಿಎಂಸಿ ಖಾತೆಗಳ ವಿವರಗಳ ಪರಿಶೀಲನೆ ನಡೆಸಿದರು. ಬಳಿಕ, ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು.
ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಶಾಲಾ ಶಿಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.