ಶಿರಹಟ್ಟಿ ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ಬಿ.ಪಿ. ಅಳವಂಡಿ ಬಾಲಕಿಯರ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದ್ವೀತಿಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿದರು
ಶಿರಹಟ್ಟಿ: ‘ಸಾಧನೆ ಮಾಡುವ ಕನಸು ಹೊತ್ತ ಆಕಾಂಕ್ಷಿಗಳಿಗೆ ಆತ್ಮವಿಶ್ವಾಸವೇ ಪ್ರಮುಖ ಅಸ್ತ್ರ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ಬಿ.ಪಿ. ಅಳವಂಡಿ ಬಾಲಕಿಯರ ಸಂಯುಕ್ತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ದ್ವಿತೀಯ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಸತತ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ಓದು ಬರಹಗಳ ಮೂಲಕ ಭವಿಷ್ಯದ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ’ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಾ.ಚಂದ್ರು ಲಮಾಣಿ, ‘ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೌಲ್ಯಗಳು ಮತ್ತು ಸಂಸ್ಕೃತಿ ಅವರ ಉಜ್ವಲ ಭವಿಷ್ಯ ರೂಪಿಸಬಲ್ಲವು’ ಎಂದು ಹೇಳಿದರು.
ಪ್ರಾಚಾರ್ಯ ಎಂ.ಆರ್. ಮೆಗಲಮನಿ, ಮಲ್ಲಪ್ಪ ನೆರ್ತಿ, ಗ್ರಾಮ ಪಂಚಾಯಿತಿ ಸದಸ್ಯ ಮೋಹನ್ ಗುತ್ತೇಮ್ಮನವರ, ತಿಮ್ಮರಡ್ಡಿ ಮರಡ್ಡಿ, ವಿನಾಯಕ ಅಳವಂಡಿ, ಭರಮರಡ್ಡಿ ಬಸವರಡ್ಡಿ, ನವೀನ ಅಳವಂಡಿ, ಕೊಟ್ರಯ್ಯ ಹೊಂಬಾಳಮಠ, ಮಂಜುನಾಥ ಮಾಗಡಿ, ಶರಣಪ್ಪ ಕಲಗುಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.