ADVERTISEMENT

‘ಒಳ್ಳೆಯದನ್ನು ಶ್ರವಣ ಮಾಡುವುದೇ ಶ್ರಾವಣಮಾಸ’

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 7:20 IST
Last Updated 5 ಆಗಸ್ಟ್ 2025, 7:20 IST
ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನದಲ್ಲಿ ಸೋಮೇಶ್ವರ ಪುರಾಣ ಸೇವಾ ಸಮಿತಿಯಿಂದ ಹಮ್ಮಿಕೊಂಡಿರುವ ಪುರಾಣ ಪ್ರವಚನ ಕಾರ್ಯಕ್ರಮವನ್ನು ಹೂವಿನಶಿಗ್ಲಿ ವಿರಕ್ತಮಠದ ಚೆನ್ನವೀರ ಸ್ವಾಮೀಜಿ ಮಾತನಾಡಿದರು *
ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನದಲ್ಲಿ ಸೋಮೇಶ್ವರ ಪುರಾಣ ಸೇವಾ ಸಮಿತಿಯಿಂದ ಹಮ್ಮಿಕೊಂಡಿರುವ ಪುರಾಣ ಪ್ರವಚನ ಕಾರ್ಯಕ್ರಮವನ್ನು ಹೂವಿನಶಿಗ್ಲಿ ವಿರಕ್ತಮಠದ ಚೆನ್ನವೀರ ಸ್ವಾಮೀಜಿ ಮಾತನಾಡಿದರು *   

ಲಕ್ಷ್ಮೇಶ್ವರ: ಶ್ರಾವಣ ಮಾಸದಲ್ಲಿ ಮಹಾತ್ಮರು, ಶರಣರು, ಸಂತರು, ಪುಣ್ಯ ಪುರುಷರ ಪುರಾಣ ಪ್ರವಚನ ಶ್ರವಣ ಮಾಡುವ್ಯದರಿಂದ ನಮ್ಮ ದುಃಖ. ದುಮ್ಮಾನ, ಕಷ್ಟ-ಕಾರ್ಪಣ್ಯ, ಪಾಪ-ಕರ್ಮಗಳು ದೂರಾಗಿ ಶಾಂತಿ, ನೆಮ್ಮದಿ, ಪುಣ್ಯ ಲಭಿಸುತ್ತದೆ’ ಎಂದು ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮೀಜಿ ಹೇಳಿದರು.

ಶ್ರಾವಣ ಮಾಸದ ಅಂಗವಾಗಿ ಇಲ್ಲಿನ ಸೋಮೇಶ್ವರ ದೇವಸ್ಥಾನದಲ್ಲಿ ಸೋಮೇಶ್ವರ ಪುರಾಣ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಸಿದ್ಧಾರೂಢ ಕಥಾಮೃತ ಪುರಾಣ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬದುಕಿನ ಜಂಜಾಟದ ಮಧ್ಯೆ ಧರ್ಮಕಾರ್ಯ, ಸತ್ಸಂಗ, ಪುರಾಣ ಕೇಳುವುದರಿಂದ ಸಾರ್ಥಕ ಬದುಕಿನ ಮಾರ್ಗ ತೆರೆದುಕೊಳ್ಳುತ್ತದೆ. ತಾಂತ್ರಿಕ ಜಮಾನಾ, ಧಾರಾವಾಹಿಗಳ ದುನಿಯಾದಲ್ಲಿ ಧಾರ್ಮಿಕ ನಂಬಿಕೆ, ಆಚರಣೆ ಮತ್ತು ಸಂಸ್ಕೃತಿ ಮರೆಯುತ್ತಿರುವುದು ದುರ್ದೈವದ ಸಂಗತಿ’ ಎಂದರು.

ADVERTISEMENT

ಬಿಸಿಎನ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಲೋಹಿತ ನೆಲವಗಿ ಮಾತನಾಡಿರು. ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಅಧ್ಯಕ್ಷ ಗುರಣ್ಣ ಪಾಟೀಲ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಚಂಬಣ್ಣ ಬಾಳಿಕಾಯಿ, ಎಸ್.ಎಫ್.ಆದಿ, ಸುರೇಶ ರಾಚನಾಯ್ಕರ, ಚನ್ನಪ್ಪ ಜಗಲಿ, ಶಂಕರ ಬಾಳಿಕಾಯಿ, ವಿರೂಪಾಕ್ಷ ಆದಿ, ಮಯೂರ ಪಾಟೀಲ, ನಂದೀಶ ಬಂಡಿವಾಡ, ಬಸವರಾಜ ಮೆಣಸಿನಕಾಯಿ, ಎನ್.ಆರ್.ಸಾತಪುತೆ, ಕಾಶಪ್ಪ ಮುಳಗುಂದ, ಶಿವಪುತ್ರಪ್ಪ ಚಾಕಲಬ್ಬಿ, ಅರ್ಚಕ ಸಮೀರ ಪೂಜಾರ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.